ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ
ಧಾರವಾಡ,ಏ14: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುμÁ್ಪರ್ಪಣೆ ಸಲ್ಲಿಸಿ, ನಮಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.