ಅಂಗನವಾಡಿ ಶಿಕ್ಷಕಿಗೆ ಸೇವಾ ರತ್ನ ಪ್ರಶಸ್ತಿ
ಚಿತ್ತಾಪುರ:ಸೆ.20: ಅಂಗನವಾಡಿ ಶಿಕ್ಷಕಿಗೆ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಕರ್ನಾಟಕ ಪ್ರೆಸ್ ಕ್ಲಬ್ “ಡಾ// ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಪರಿಷತ್ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ 2024 ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮ್ತತು ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬ ಫಲಾನುಭವಿಗಳ ಮನೆ ಮನೆಗೆ ಹೋಗಿ ತಲುಪಿಸಿ ಗ್ರಾಮದಲ್ಲಿ ಹೆಸರುವಾಸಿ ಆಗಿರುವ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಅಂಗನವಾಡಿ ಕೇಂದ್ರ 5ರ ಕಾರ್ಯಕರ್ತೆ ವಿದ್ಯಾನಿಧಿ ಕವಡೆ ಅವರನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕಾಗಿ ಕ್ಲಬ್ ನ ಪ್ರಧಾನ ಕಾರ್ಯದರ್ಶಿಗಳಿಗೂ ಹಾಗೂ ಸದಸ್ಯರುಗಳಿಗೂ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಪ್ರಶಸ್ತಿ ಆಯ್ಕೆ ಮಾಡಿದ ಎಲ್ಲರಿಗೂ ಕವಡೆ ಅವರು ಧನ್ಯವಾದ ಸಲ್ಲಿಸಿದ್ದಾರೆ.