ಸಿದ್ಧಾಂಥ ಶಿಖಾಮಣಿ ಅಭಿಯಾನ ಸಮಾರೋಪ ಪ್ರಚಾರಕ್ಕೆ ಶಾಸಕ ಬೆಲ್ದಾಳೆ ಚಾಲನೆ
ಬೀದರ್:ಸೆ.20: ನಗರದಲ್ಲಿ ಸೆ. 22 ರಂದು ಹಮ್ಮಿಕೊಳ್ಳಲಾದ ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ ಅರ್ಪಣೆ ಅಭಿಯಾನ, ಶ್ರಾವಣ ಶಿವ ದರ್ಶನ ಸಂಚಾರ ಸಮಾರೋಪ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭದ ಸಾಮಾಜಿಕ ಜಾಲತಾಣ ಪ್ರಚಾರ ವೇದಿಕೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಿದರು.
ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಜಿಲ್ಲೆಯ ಮಠಾಧೀಶರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಗುರುಗಳ ವಾಣಿ ಆಲಿಕೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಶಾಂತಿ ಹಾಗೂ ನೆಮ್ಮದಿ ದೊರಕುತ್ತದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಶಿವಯ್ಯ ಸ್ವಾಮಿ ಅವರು, ಸಮಾರಂಭಕ್ಕೆ ಭರದ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.
ನೌಬಾದನ ಜ್ಞಾನ ಶಿವಯೋಗಾಶ್ರಮದ ಪೀಠಾಧಿಪತಿ ಡಾ. ರಾಜಶೇಖರ ಶಿವಾಚಾರ್ಯ,
ಪತ್ರಕರ್ತ ಸದಾನಂದ ಜೋಶಿ, ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ ಬಂಬಳಗಿ, ವರದಯ್ಯ ಸ್ವಾಮಿ ಗಾದಗಿ, ವಕ್ತಾರ ಮಹಾಲಿಂಗ ಸ್ವಾಮಿ ಚಟ್ನಳ್ಳಿ, ಖಜಾಂಚಿ ಕಂಟೆಪ್ಪ ಭಂಗೂರೆ ಮತ್ತಿತರರು ಇದ್ದರು.