ರಾಮುಲು ಪತ್ನಿ ಭಾಗ್ಯಲಕ್ಷ್ಮಿ ಬಳಿ  22.57 ಕೋಟಿ ಆಸ್ತ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.13:  ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರ ಪತ್ನಿ ಭಾಗ್ಯಲಕ್ಷ್ಮಿ ಬಳಿ, 22.57 ಕೋಟಿ ರೂ. ಚರ, ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
ತಮ್ಮ ಕೈನಲ್ಲಿ 2.50 ಲಕ್ಷ ರೂ. ನಗದು ಹಣ ಹೊಂದಿರುವ ಇವರ ಹೆಸರಲ್ಲಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ 30829 ರೂ. ಹಣ, 1.50 ಕೋಟಿ ಮೌಲ್ಯದ 2330 ಗ್ರಾಂ ಚಿನ್ನಾಭರಣ ಸೇರಿ ಒಟ್ಟು 2,28,14,089 ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ವಿವಿಧೆಡೆ ಜಮೀನು, ನಿವೇಶನ ಸೇರಿ ಒಟ್ಟು 20.29 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದು, 9325 ಲಕ್ಷ ರೂ. ಸಾಲ ಹೊಂದಿದ್ದಾರೆ ಎಂದು ಪ ಅವರು ಚುನವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ದೃಢೀಕರಿಸಿದ್ದಾರೆ.