ಮತ ಚಲಾವಣೆ- ಪ್ರತಿ ನಾಗರಿಕನ ನೈತಿಕ ಹೊಣೆ
ಸಂಜೆವಾಣಿ ವಾರ್ತೆ
ಸಂಡೂರು: ಏ:13:  ಮತ ಚಲಾವಣೆ- ಪ್ರತಿ ನಾಗರಿಕನ ನೈತಿಕ ಹೊಣೆ ಯಾಗಿದ್ದು ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ ಎಂದು ಸಂಡೂರು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಷಡಕ್ಷರಯ್ಯ ತಿಳಿಸಿದರು..
ಅವರು ಪಟ್ಟಣದ ತಾಲೂಕು ಪಂಚಾಯಿತಿ ಅವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿ ಚುನಾವಣೆಯಲ್ಲಿ ಪ್ರಭುದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ನೈತಿಕ ಹೊಣೆಯಾಗಿದ್ದು ಯಾವುದೇ ಕಾರಣಕ್ಕೂ ಈ ಪ್ರಕ್ರಿಯೆಯಿಂದ ವಂಚಿತರಾಗಬಾರದು, ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಡೂರು ಪಟ್ಟಣದ ಮತಗಟ್ಟೆ ಸಂಖ್ಯೆ 50 ರಲ್ಲಿ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನ ಮಾಡಿರುವ ಪ್ರಯುಕ್ತ ದಿನಾಂಕ 12/04/2024 ರಂದು ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಸ್ವೀಪ್ ಸಮಿತಿ, ಪುರಸಬೆ ಹಾಗೂ ಸಿಡಿಪಿಓ ಕಚೇರಿಯ ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಮತ್ತು ಇತರರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ಕರೆನೀಡಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಶ್ರೀ. ಜಯಣ್ಣ, ಸಿ.ಡಿ.ಪಿ.ಓ ಎಳೆ ನಾಗಪ್ಪ, ಸಂಡೂರು ಪಂಚಾಯತ್ ರಾಜ್ ಸಹಾಯಕ ನಿರ್ಧೇಶಕರಾದ , ದುರುಗಪ್ಪ ರವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರು ಭಾಗವಹಿಸಿದ್ದರು.