ಪಕ್ಷದಿಂದ ದೂರ ಉಳಿದ ನಾಯಕರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ ಕೊರಬು
ಅಫಜಲಪುರ:ಏ.13: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿದ ಎಲ್ಲ ಮುಖಂಡರು ಈಗ ಪಕ್ಷೇತರ ಅಭ್ಯರ್ಥಿ ಕೋಮುವಾದಿ ಬಿಜೆಪಿ ಪಕ್ಷಕ್ಕೆ ಹೋಗಿದ್ದರಿಂದ ಜಾತ್ಯತೀತ ಮನೋಭಾವನೆ ಹೊಂದಿರುವ ನಾಯಕರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬಂದು ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಮನವಿ ಮಾಡಿದ್ದಾರೆ.
ಕಳೆದ 5 ವರ್ಷದ ಅವಧಿಯಲ್ಲಿ ಈ ಭಾಗದ ಸಂಸದ ಡಾ.ಉಮೇಶ ಜಾಧವ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ.ಹೀಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರಿಗೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು.ಈ ಭಾಗಕ್ಕೆ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
-ಜೆ.ಎಂ.ಕೊರಬು , ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರು.