ಶ್ರೀ ವಿದ್ಯಾ ಕಾಲೇಜಿಗೆ ನೂರರಷ್ಟು ಫಲಿತಾಂಶ ; ಕವಿರಾಜ ಪಾಟೀಲ
ಕಲಬುರಗಿ ;ಏ.13: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಶ್ರೀ ವಿದ್ಯಾ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಶ್ರೀ ವಿದ್ಯಾ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರಾದ ಡಾ. ಕವಿರಾಜ ಸಿ.ಪಾಟೀಲ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು 88 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಅಗ್ರಶ್ರೇಣಿ, 61 ಪ್ರಥಮ ಮತ್ತು 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಕಾಲೇಜಿಗೆ ಒಟ್ಟು 100 ಕ್ಕೆ 100 ರಷ್ಟು ಫಲಿತಾಂಶ ಶ್ರೀ ವಿದ್ಯಾ ಕಾಲೇಜಿಗೆ ದೊರೆತಿದೆ ಎಂದು ಹೇಳಿದರು.
ಪ್ರೀತಿ – 588, ಯಶವಂತ -576, ಪೂಜಾ – 572, ಶಿವಕುಮಾರ – 569, ಮಹೇಶ – 550, ಅರ್ಚನಾ – 541, ಪ್ರಿಯಾಂಕಾ – 541 ಅಂಕ ಪಡೆದು ಜಿಲ್ಲೆಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಪ್ರಮೋದ್ ಇಟಗಿ, ಸದಸ್ಯರು, ಪ್ರಾಚಾರ್ಯರು,ಉಪನ್ಯಾಸಕರು, ಹಾಗೂ ಸಿಬ್ಬಂದಿ ವರ್ಗ ಸಂತಸ ವ್ಯಕ್ತಪಡಿಸಿದ್ದಾರೆ.
ಉಪನ್ಯಾಸಕರು ವಿದ್ಯಾರ್ಥಿಗಳ ಮೇಲೆ ವಿಶೇಷ ಕಾಳಜಿ ,ಪ್ರೀತಿ ತೋರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹೆಚ್ಚಾಗುತ್ತದೆ. ಶ್ರೀ ವಿದ್ಯಾ ಕಾಲೇಜಿಗೆ ಉತ್ತಮ ಫಲಿತಾಂಶ ಬರುವುದಕ್ಕೆ ಕಾಲೇಜಿನ ಸರ್ವ ಸಿಬ್ಬಂದಿ ವರ್ಗದವರು ಕಾರಣಿಕರ್ತರು. ಜೆಇಇ ಮತ್ತು ಸಿಇಟಿ ಪರೀಕ್ಷೆಯಲ್ಲಿಯೂ ಉತ್ತಮ ಶ್ರೇಣಿ ಪಡೆಯಲಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸುವೆ.