ಚಿತ್ರದುರ್ಗ ವಿಧಾನಸಭಾ ಕ್ಷೇತ್ರ:ಮನೆಯಿಂದ ಮತದಾನ: ಅಧಿಕಾರಿಗಳಿಗೆ ತರಬೇತಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೧೩; ಚಿತ್ರದುರ್ಗ ನಗರದ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ  ಮನೆಯಿಂದ ಮತದಾನಕ್ಕೆ ತೆರಳುವ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದೇ ಏಪ್ರಿಲ್ 13 ರಿಂದ 15 ರವರೆಗೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮನೆ ಮತದಾನಕ್ಕೆ ತೆರಳುವ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.ತರಬೇತಿಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಸೇರಿದಂತೆ ಮತ್ತಿತರರು ಇದ್ದರು.