ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಚನ್ನಮ್ಮನ ಕಿತ್ತೂರ,ಮೇ.13: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರವಾರದಲ್ಲಿ ನಾಮ ಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಗಂಗೂಬಾಯಿ ರಮೇಶ ಮಾನಕರ ಕಾರ್ಯನಿರ್ವಹಿಸಿದರು. ಈ ವೇಳೆ ಕಿತ್ತೂರ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ, ಶಾಸಕ ವಿಠ್ಠಲ ಹಲಗೇಕರ, ರೂಪಾಲಿ ನಾಯಕ, ಸುನೀಲ್ ಕುಮಾರ, ನಾಸೀರ ಬಾಗವಾನ್, ಸುನೀಲ್ ಹೆಗಡೆ, ದಿನಕರ ಶೆಟ್ಟಿ, ಗಣಪತಿ ಉಳ್ವೇಕರ, ಬಿಜೆಪಿ ಪದಾಧಿಕಾರಿಗಳು ಹಾಗೂ, ಜೆಡಿಎಸ್ ಮುಖಂಡರು, ಕಾರ್ಯಕರ್ತರಿದ್ದರು.