ಮದುವೆ ಮನೆಯಲ್ಲಿ ಮತದಾನ ಜಾಗೃತಿ
ದಾವಣಗೆರೆ,ಏ.13; 18 ನೇ ಲೋಕಸಭಾ ಚುನಾವಣೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಚುನಾವಣೆಯಲ್ಲಿ ಎಲ್ಲಾ ಮತದಾರರು ಮತದಾನ ಮಾಡಬೇಕೆಂದು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು ಜಗಳೂರು ತಾಲ್ಲೂಕಿನ ಗುರುಸಿದ್ದಾಪುರದಲ್ಲಿ ಹಾಲೇಶ್ ಮತ್ತು ಪ್ರೀತಿ ಇವರ ಮದುವೆ ಮನೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ನವ ದಂಪತಿಗಳು ಸೇರಿದಂತೆ ಬಂದು, ಬಾಂಧವರು ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಕರೆ ನೀಡಲಾಯಿತು.
 ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಭಾಗವಹಿಸಿದ್ದರು.