ಎ.22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ: ಡಿ.ಸಿ
ಬೀದರ್:ಏ.12: ಈ ತಿಂಗಳ 22 ರಂದು ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ವಾಪಸ್ ಪಡೆಯುವ ಸಮಯ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಇಂದಿನಿಂದ ಈ ತಿಂಗಳ 13ರ ವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಈ ತಿಂಗಳ 20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22ರಂದು ನಾಮಪತ್ರ ಹಿಂತೆಗೆದುಕೊಳ್ಳುವ ದಿನಾಂಕ ನಿಗದಿಯಾಗಿದೆ. ಮೇ 7ರಂದು ಚುನಾವಣೆ ನಡೆಯಲಿದ್ದು ಜುನ್ 4ರಂದು ಮತ ಎಣಿಕೆ ನಡೆಯಲಿದೆ. 6ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು 3 ವಾಹನಗಳನ್ನು ಮಾತ್ರ ಜಿಲ್ಲಾಧಿಕಾರಿಗಳ ಕಚೇರಿ ಸವರಣದೊಳಗೆ ಬಿಡಲಾಗುವುದು. ಅಭ್ಯರ್ಥಿ ಜೊತೆಗೆ ಇನ್ನು 4 ಜನರಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿ ಸೇರಿ ಐದು ಜನರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪೆÇೀಲಿಸ್ ವರಿಷ್ಟಾಧಿಕಾರಿ ಚನ್ನಬಸವಣ್ಣ.ಎಸ್.ಎಲ್ ಇದ್ದರು.