ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮುಕ್ತ ಮತದಾನ ಮಾಡಿ
ಕರಜಗಿ:ಏ.12:ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಾಲೂಕಿನ ಮತದಾನ ಪ್ರತಿಶತವನ್ನು ಹೆಚ್ಚಿಸಬೇಕು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಕರೆ ನೀಡಿದರು.
ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ,
ಜಿಲ್ಲಾ ಪಂಚಾಯತ ಕಲಬುರಗಿ ತಾಲೂಕು ಪಂಚಾಯತ ಅಫಜಲಪುರ, ತಾಲೂಕು ಸ್ವಿಪ್ ಸಮಿತಿ ಅಫಜಲಪುರ,ಇವರ ಸಂಯುಕ್ತ ಆಶ್ರಯದಲ್ಲಿ ಅಫಜಲಪುರ ತಾಲೂಕಿನ ಗೊಬ್ಬೂರ ಬಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೊಬ್ಬೂರ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾನ
ಮಾಡಬೇಕು.ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಿದಾಗ ಮಾತ್ರ ತಾಲೂಕಿನ ಮತದಾನ ಪ್ರತಿಶತ ಹೆಚ್ಚಳವಾಗಲು ಸಾಧ್ಯವಾಗುತ್ತದೆ.ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಮತದಾನದ ಅವಶ್ಯಕತೆ ಇದ್ದು, ಅದಕ್ಕಾಗಿ ತಾಲೂಕಿನಾದ್ಯಂತ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.ಗೊಬ್ಬೂರ ಬಿ.ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶೇಕಡಾ ನೂರರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು.ಬೇಸಿಗೆ ಕಾಲ ಇರುವುದರಿಂದ ತಾಲೂಕಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ.ಆದ್ದರಿಂದ ಪ್ರತಿಯೊಬ್ಬರೂ ನೀರನ್ನು ಪೆÇೀಲು ಮಾಡದೇ ಮಿತವಾಗಿ ಅವಶ್ಯಕತೆ ಇದ್ದಷ್ಟು ಬಳಸಬೇಕು.ತಾಲೂಕಿನಾದ್ಯಂತ ಜನರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಖಾಸಗಿ ಬೋರ್ ವೆಲ್ ಮಾಲೀಕರಿಂದ ನೀರು ಖರೀದಿಸಿ ನೀರಿನ ವ್ಯವಸ್ಥೆ ಮಾಡಲಾಗುವುದು
ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಹಾಜಿಮಲಂಗ ತಾಂತ್ರಿಕ ಸಂಯೋಜಕಿ ಮಾಲಾಶ್ರೀ ತಾಲೂಕು ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ ಡಿಇಒ ಆನಂದ ಸೇರಿದಂತೆ ಕೂಲಿಕಾರ್ಮಿಕರು ಗ್ರಾಮಸ್ಥರಿದ್ದರು.