ಬರಗಾಲ ಅರಿಯದ. ಬರ ಪರಿಹಾರ ನೀಡದ ಅಭ್ಯರ್ಥಿಗಳಿಗೆ ಹಳ್ಳಿಗಳ ಪ್ರವೇಶ ನಿರ್ಭಂಧಿಸಿ.

ಸಂಜೆವಾಣಿ ವಾರ್ತೆ
ದಾವಣಗೆರೆ. ಏ.೧೨; ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸುವುದನ್ನು ಬಿಟ್ಟು ಜನಪ್ರತಿನಿಧಿಗಳು ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿದ್ದಾರೆ ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ  ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟ ಕಾಲದಲ್ಲಿ ಜಗಳವಾಡುತ್ತಾ ಮನರಂಜನೆ ನಿಡುತ್ತಿದ್ದಾರೆ. ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ ಈ ನಾಟಕ ಬಿಡಿ .ಪರಿಹಾರ ನೀಡಿ. ಇಲ್ಲವೇ ಮತ ಕೇಳಲು ಬರಬೇಡಿ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ ಎಂದು ಕರೆ ನೀಡಿದರು. ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲವಾಗಿದ್ದಾರೆ   ರಾಜ್ಯದಲ್ಲಿ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗದಂತಾಗಿದೆ ಅಧಿಕಾರಿಗಳು ಚುನಾವಣೆ ಕಾರಣ ಹೇಳಿ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ . ರಾಜಕೀಯ ಪಕ್ಷದ ಮುಖಂಡರು ಅಧಿಕಾರ ಹಿಡಿಯುವ ಹುಚ್ಚಿನಲ್ಲಿ ತೇಲಾಡುತ್ತಿದ್ದಾರೆ.ಬರಗಾಲದ ನೀರಿನ ಸಮಸ್ಯೆಯಿಂದ ರೈತರ ಬೆಳೆಗಳು ಒಣಗುತ್ತಿವೆ ಕೊಳವೆ ಬಾವಿಗಳಲ್ಲಿ ನೀರು ಹಿಂಗುತ್ತಿವೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು .ರೈತರು ಎಚ್ಚೆತ್ತುಕೊಂಡು ಸ್ವಾಭಿಮಾನದಿಂದ ಹಳ್ಳಿಗಳಲ್ಲಿ ಗುಡಿ ಗೋಪುರ ಕಟ್ಟುವ ಚಿಂತನೆ ಮಾಡುವ ಬದಲು ಕೆರೆ ಕಟ್ಟೆಗಳ ಹೂಳೆತ್ತುವ ಮೂಲಕ  ಪುನಶ್ಚೇತನಗೊಳಿಸುವ ಹಾಗೂ ಹೊಸದಾಗಿ ಕೆರೆಕಟ್ಟೆ ನಿರ್ಮಿಸುವ ಕೆಲಸದಲ್ಲಿ  ಶ್ರದ್ದೆ ವಹಿಸಿದರೆ ಮುಂದಿನ ತಲೆಮಾರಿಗೆ ಕೊಳವೆ ಬಾವಿಗಳಲ್ಲಿ ನೀರು ಶೇಖರಣೆಯಾಗಿ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದರು.  ಬರಗಾಲದ ಬವಣೆಯಿಂದ ರೈತರಿಗೆ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗುತ್ತಿಲ್ಲ.  ರಾಜ್ಯಾದ್ಯಂತ 78 ಸಕ್ಕರೆ ಕಾರ್ಖಾನೆಗಳು 5 ಕೋಟಿ 80 ಲಕ್ಷ ಕಬ್ಬು ನುರಿಸಿವೆ ಸುಮಾರು 2600ಕೋಟಿ ಕಬ್ಬಿನ ಬಾಕಿ ಹಣವನ್ನು  ರೈತರಿಗೆ ಪಾವತಿಸಿಲ್ಲ ಕಬ್ಬು ಹಾಗೂ ಸಕ್ಕರೆ ಅಭಿವೃದ್ಧಿ ಆಯುಕ್ತರು ಈ ಕೂಡಲೇ ಕಾನೂನು ಕ್ರಮ ಕೈಗೊಂಡು ಶೇಕಡ 15 ಬಡ್ಡಿ ಸೇರಿಸಿ ಹಣ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದರು.ರಾಜ್ಯದಲ್ಲಿ ಸುಮಾರು 10 ಲಕ್ಷ ಕೊಳವೆ ಬಾವಿಗಳಲ್ಲಿ ನೀರು ಹಿಂಗಿ ಹೋಗಿದೆ ಕಬ್ಬಿನ ಬೆಳೆ. ತೆಂಗು. ಬಾಳೆ.ಬೆಳೆಗಳು ಒಣಗುತ್ತಿವೆ  ಇಂಥಹ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲೀನರಾಗಿದ್ದಾರೆ.ಇನ್ನಾದರು ಸಂಬಂದ ಪಟ್ಟವರು  ರೈತರ ಸಂಕಷ್ಟ ಅರಿತು ಕೊಳ್ಳಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿ ಎಂದು ಒತ್ತಾಯಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿಗಳನ್ನು 15 ರಂದು ಬೆಂಗಳೂರಿನಲ್ಲಿ ಭೇಟಿ ಮಾಡುತ್ತಿದ್ದೇವೆ ಎಂದರು.