ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಸಿದ ಡಿಸಿ
ರಾಯಚೂರು,ಏ.೧೨-ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ಅಧಿಸೂಚನೆ ಪ್ರಕಾರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಎಲ್.ಚಂದ್ರಶೇಖರ ನಾಯಕ ಅವರು ವೇಳಾ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೦೬-ರಾಯಚೂರು (ಪ.ಪಂ) ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೇಗೆ ಒಬ್ಬ ಸದಸ್ಯನನ್ನು ಚುನಾವಣೆಯಿಸು ಚುನಾವಣೆ ನಡೆಸಬೇಕಾಗಿದ್ದು, ೦೬-ರಾಯಚೂರು (ಪರಿಶಿಷ್ಟ ಪಂಗಡ) ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ಸಂಬಂಧಿಸಿದಂತೆ ನಾಮ ಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ೦೬-ರಾಯಚೂರು (ಪ.ಪಂ) ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿ ಎಲ್. ಚಂದ್ರಶೇಖರ್ ನಾಯಕ್ ರವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ರವರಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಏ.೧೨ರಿಂದ ಏ.೧೯ರ ವರೆಗೆ ಬೆಳಿಗ್ಗೆ ೧೧:೦೦ ರಿಂದ ಮದ್ಯಾಹ್ನ ೩:೦೦ ರ ನಡುವೆ ಯಾವುದೇ ದಿನದಂದು (ಸರ್ಕಾರಿ ರಜಾದಿನದ ಹೊರತು) ಸಲ್ಲಿಸಬಹುದಾಗಿದೆ.
ನಾಮ ಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ವೇಳೆಯಲ್ಲಿ ಪಡೆದುಕೊಳ್ಳಬಹುದು. ನಾಮ ಪತ್ರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ರಾಯಚೂರು ಇಲ್ಲಿ ಏ.೨೦ರ(ಶನಿವಾರ) ರಂದು ಬೆಳಿಗ್ಗೆ ೧೧:೦೦ ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಮೇಲ್ಕಂಡ (೨)ನೇಯ ಪ್ಯಾರಾದಲ್ಲಿ ನಿರ್ದಿಷ್ಟಪಡಿಸಿದ ಇಬ್ಬರಲ್ಲೊಬ್ಬ ಅಧಿಕಾರಿಗೆ ನಿಗಧಿ ಪಡಿಸಿದ ಕಛೇರಿಯಲ್ಲಿ ಏ.೨೨ರ (ಸೋಮುವಾರ)ದಂದು ಮಧ್ಯಾಹ್ನ ೦೩:೦೦ ಗಂಟೆಗೆ ಮುಂಚೆ ಸಲ್ಲಿಸಬಹುದು.
ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ ಮೇ.೭(ಮಂಗಳವಾರ) ರಂದು ಬೆಳಿಗ್ಗೆ ೦೭:೦೦ ಗಂಟೆಯಿಂದ ಸಂಜೆ ೦೬:೦೦ ಗಂಟೆಯ ವರೆಗೆ ಮತದಾನ ನಡೆಯುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.