ಮತಗಟ್ಟೆ ಪರಿಷ್ಕರಣೆ: ಸಭೆ
ಬಾಗಲಕೋಟೆ,ಸೆ20: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತಗಟ್ಟೆಯ ತರ್ಕಬದ್ದಗೊಳಿಸುವ ಕುರಿತು ಜಿಲ್ಲೆಯ ಪ್ರಮುಖ ರಾಜಕೀಯ ಪಕ್ಷಗಳ ಅಧ್ಯಕ್ಷರ, ಮುಖಂಡರ ಜೊತೆ ಸಭೆ ಜರುಗಿತು.
ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವುದು, ಮತಗಟ್ಟೆ ವಿಳಾಸ ಬದಲಾವಣೆ ಇದ್ದಲ್ಲಿ ಬದಲಾವಣೆ ಮಾಡುವದು, ಮತಗಟ್ಟೆಗಳನ್ನು ವಿಲೀನಗೊಳಿಸುವುದು, ಮತಗಟ್ಟೆಗಳನ್ನು ಸ್ಥಳಾಂತರ ಮಾಡುವುದು ಹಾಗೂ ಹೆಡ್ಡರ್ ಪೇಜ್‍ಗೆ ಸಂಬಂಧಿಸಿದ ಬದಲಾವಣೆಗಳಿದ್ದಲ್ಲಿ ನಿಗದಿತ ನಮೂನೆಗಳಲ್ಲಿ ಪ್ರಸ್ತಾವನೆ ತಯಾರಿಸಿ ಸಲ್ಲಿಸಲು ಸಭೆಯಲ್ಲಿ ತಿಳಿಸಲಾಯಿತು.
ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಮತಕ್ಷೇತ್ರಗಳ ತಹಶೀಲ್ದಾರ, ಉಪವಿಭಾಗಾಧಿಕಾರಿಗಳು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಹಿನ್ನಲೆಯಲ್ಲಿ ಹೊಸದಾಗಿ ಮತಗಟ್ಟೆಗಳನ್ನು ಸ್ಥಾಪಿಸುವುದು, ಮತಗಟ್ಟೆ ವಿಳಾಸ ಬದಲಾವಣೆ ಮಾಡುವುದು ಸೇರಿದಂತೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ನಿಗದಿತ ನಮೂನೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದ ಮಾಹಿತಿಯನ್ನು ನೀಡಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ಅಮರೇಶ ಪಮ್ಮಾರ, ಚುನಾವಣಾ ಶಿರಸ್ತೆದಾರ ಮಹೇಶ ಪಾಂಡವ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಮತದಾರ ಪಟ್ಟಿ ಪರಿಷ್ಕರಣೆ ವೇಳಾ ಪಟ್ಟಿ
ಮನೆ ಮನೆ ಸಮೀಕ್ಷೆ ಅಕ್ಟೋಬರ 18 ವರೆಗೆ ನಡೆಯಲಿದ್ದು, ಸೆಪ್ಟೆಂಬರ 30 ವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಸರು ಸೇರಿಸುವುದು, ತೆಗೆದು ಹಾಕುವುದು, ತಿದ್ದುಪಡಿ ಹಾಗೂ ಸ್ಥಳಾಂತರ ಚಟುವಟಿಕೆಗಳು ನಡೆಯಲಿವೆ. ಅಕ್ಟೋಬರ 29 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಹಕ್ಕು ಮತ್ತು ಆಕ್ಷೇಪಣೆಗೆ ಅಕ್ಟೋಬರ 29 ರಿಂದ ನವೆಂಬರ 28 ವರೆಗೆ ನಡೆಯಲಿದೆ. ಮತದಾನ ವಿಶೇಷ ನೋಂದಣಿ ಅಭಿಯಾನಗಳು ನವೆಂಬರ 9 ಮತ್ತು 10, ಡಿಸೆಂಬರ 14 ಮತ್ತು 15 ರಂದು ನಡೆಯಲಿವೆ. ಅಚಿತಿಮ ಮತದಾರರ ಪಟ್ಟಿಯನ್ನು ಜನವರಿ 06, 2025 ರಂದು ಪ್ರಕಟಿಸಲಾಗುತ್ತಿದೆ.