ಪ್ರಗತಿ ಪರಿಶೀಲನಾ ಸಭೆ
ಗದಗ,ಸೆ.20:ಜಗತ್ತಿನಲ್ಲಿಯೇ ಅತ್ಯಂತ ಕಡಿಮೆ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕೋಟ್ಯಂತರ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿ ನಿಜವಾಗಿ ಮಾನವ ಹಕ್ಕುಗಳ ರಕ್ಷಣೆ ಗೊಳಿಸಿದ್ದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಬಿ ಬಿ ಅಸೂಟಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಗದಗ ಜಿಲ್ಲೆಯೂ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿ ಬರುವಂತೆ ಎಲ್ಲರು ಪ್ರಾಮಾಣಿಕವಾಗಿ ಶ್ರಮವಹಿಸಿ ಪ್ರತಿಯೊಂದು ಗ್ಯಾರಂಟಿ ಯೋಜನೆಯಲ್ಲಿ ಶೇ 100 ರಷ್ಟು ಸಾಧಿಸುವಂತೆ ಮಾಡೋಣ ಹಾಗೂ ಇದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಪ್ರಥಮ ಸಭೆಯಾಗಿದ್ದು ಸಭೆಯಲ್ಲಿರುವ ವಿವಿಧ ತಾಲೂಕ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರು ಮುಕ್ತವಾಗಿ ತಮ್ಮ ಸೂಚನೆ ಸಲಹೆಗಳನ್ನು ನೀಡಬೇಕು ಎಂದರು.
ಗೃಹಜ್ಯೊತಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಅರ್ಹವಿರುವ 278286 ಸ್ಥಾವರಗಳಲ್ಲಿ 272085 ಸ್ಥಾವರಗಳು ನೊಂದಣಿಯಾಗಿ ಗೃಹಜ್ಯೊತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಯಜಮಾನಿ ಕಾರ್ಡ ಹೊಂದಿರುವವರ ಸಂಖ್ಯೆ ಒಟ್ಟು 248118 ಇದರಲ್ಲಿ 246675 ಅರ್ಜಿಗಳು ಸ್ವೀಕೃತಗೊಂಡಿವೆ. ಅದರಲ್ಲಿ 243555 ಅರ್ಜಿಗೆ ಮಂಜೂರಾಗಿ ಶೇ 98.70 ರಷ್ಟು ಗುರಿಸಾಧಿಸಲಾಗಿದೆ. ಎನ್‍ಪಿಸಿಐ ವಿಫಲ ವರದಿ ( ಜಿಎಸ್ ಟಿ/ ಐಟಿ ತೊಂದರೆಗಳಿಂದ 1320 ಅರ್ಜಿಗಳು ಬಾಕಿ ಉಳಿದಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.
ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ನಗದು ವರ್ಗಾವಣೆಯನ್ನು ಜುಲೈ-2023 ರಿಂದ ಆರಂಭಿಸಲಾಯಿತು. ಪ್ರತಿ ಸದಸ್ಯರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಮೊತ್ತ 170 ರಂತೆ 6,43,423 ಜನರಿಗೆ ಜುಲೈ-2023 ರಲ್ಲಿ ಪಾವತಿಸಲಾಯಿತು. ನಂತರ ನಿರಂತರವಾಗಿ ಪ್ರತಿ ತಿಮಗಳು ಪಾವತಿಸಲಾಗುತ್ತಿದೆ. ಜೂನ್ 2024 ರಲ್ಲಿ 7,59,604 ಸದಸ್ಯರಿಗೆ ಡಿಬಿಟಿ ಮುಲಕ ಹೆಚ್ಚುವರಿ ಅಕ್ಕಿಯ ಮೊತ್ತವನ್ನು ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಕ್ತಿ ಯೋಜನೆಯಿಂದ ಜಿಲ್ಲೆಯಲ್ಲಿ 65073969 ಮಹಿಳೆಯರು ಸದುಪಯೋಗ ಪಡೆದುಕೊಂಡು
ವಾ.ಕ.ರಾ.ಸಂಸ್ಥೆಗೆ ಸೆಪ್ಟೆಂಬರ್ 2024 ರವರೆಗೆ 2017355286 ರೂ. ಆದಾಯ ಹೊಂದಿದೆ ಎಂದು ಸಭೆಗೆ ತಿಳಿಸಿದರು.
ಯುವ ನಿಧಿ ಯೋಜನೆ; 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳು ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು ಡಿಪೆÇ್ಲಮಾ ಹೊಂದಿದವರಿಗೆ ಈ ಯೊಜನೆ ಅನ್ವಯವಾಗುತ್ತದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023 ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೊಗ ಲಭಿಸದ ಪದವೀಧರ ನಿರುದ್ಯೋಗಿಗಲಿಗೆ ಪ್ರತಿ ತಿಂಗಳು 3,000/ ನಿರುದ್ಯೋಗ ಭತ್ಯೆ ಹಾಗೂ ಡಿಪೆÇ್ಲಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಯುವನಿಧಿ ಯೋಜನೆಯಡಿ ಇದುವರೆಗೆ 7270 ಅಭ್ಯರ್ಥಿಗಳ ನೋಂದಣಿಯಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಸಿಇಒ ಭರತ್ ಎಸ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ರಗಳಾದ ಶ್ರೀಮತಿ ನೀಲಮ್ಮ ಬೊಳನವರ, ಹೇಮಂತಗೌಡ ಪಾಟೀಲ, ಶರಣಪ್ಪ ಬೇಟಗೇರಿ, ಪಿ ಬಿ ಅಳಗವಾಡಿ, ದೀಪಕ್ ಲಮಾಣಿ, ಸೇರಿದಂತೆ ಸಮಿತಿಯ ಸದಸ್ಯರು ಹಾಜರಿದ್ದರು. ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಇದ್ದರು.