ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗವಿಲ್ಲ !
ವಾಡಿ,ಸೆ.೨೦-ಇಲ್ಲಿನ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡಲು ಸ್ಥಳಿಯರು ತಾಂತ್ರಿಕವಾಗಿ ಪರಿಣಿತರಾಗಿದ್ದರೂ ಅವರಿಗೆ ಅವಕಾಶ ನೀಡದೆ ಗುಜರಾತ ಸೇರಿದಂತೆ ಇತರೆ ರಾಜ್ಯದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.
ಗುಜರಾತ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ರಾಜ್ಯಗಳಿಂದ ಆಗಮಿಸಿದವರಿಗೆ ಕೆಲಸ ನೀಡಲಾಗುತ್ತಿದೆ. ಆದರೆ ಸ್ಥಳಿಯರಿಗೆ ಮಾತ್ರ ಕೆಲಸ ನೀಡುತ್ತಿಲ್ಲ. ಇಲ್ಲಿನ ಭೂಮಿ, ನೀರು, ಸಂಪನ್ಮೂಲ ಬಳಸಿಕೊಂಡು ಇಲ್ಲಿನ ಜನರಿಗೆ ಉದ್ಯೋಗ ನೀಡದೇ ಇರುವುದು ಸರಿಯಲ್ಲ ಎಂದು ಸ್ಥಳಿಯರು ಕಂಪನಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರೋಜನಿ ಮಹಿಷಿ ವರದಿ ಅನುಸಾರ ಸ್ಥಳಿಯರಿಗೆ ಉದ್ಯೋಗ ನೀಡಬೇಕು ಆದರೆ, ಸ್ಥಳಿಯರಿಗೆ ಉದ್ಯೋಗವಕಾಶ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಕಂಪನಿಯಲ್ಲಿ ಕೆಲಸ ಮಾಡುವ ಸ್ಥಳಯರಿಗೆ ಬೇರೆ ಕಡೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ನಿಗಾ ವಹಿಸಿ ಸ್ಥಳಿಯರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.