ಏ.14ಕ್ಕೆ ಪ್ರಧಾನಿ ಮೋದಿ ಮೈಸೂರಿಗೆ
ಸಂಜೆವಾಣಿ ನ್ಯೂಸ್
ಮೈಸೂರು: ಏ.12:- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಅಭ್ಯರ್ಥಿಗಳ ಪರ ಮತ ಶಿಕಾರಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅಂದು ಸಂಜೆ 4ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮುಂತಾದವರು ಪಾಲ್ಗೊಳ್ಳುವರು ಎಂದರು.
ಈಗಾಗಲೇ ಮೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಇದರ ಜೊತೆಗೆ ಪ್ರಧಾನಿ ಮಂತ್ರಿ ಅವರು ಸಮಾವೇಶ ನಡೆಸುತ್ತಿರುವುದು ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ದೊಡ್ಡ ಶಕ್ತಿ ಬರಲಿದೆ. ಸುಮಾರು 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಬೆದರಿಕೆಗೆ ನಮ್ಮ ಕಾರ್ಯಕರ್ತರು ಬಗ್ಗಲ್ಲ:
ಹಬ ಬಲ-ತೊಳ್ಬಲದಿಂದ ಕಾಂಗ್ರೆಸ್ ವಿರೋಧ ಪಕ್ಷಗಳನ್ನು ಬೆದರಿಸಲು ಮುಂದಾಗಿದ್ದು, ಇದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬಗ್ಗುವುದಿಲ್ಲ. ಹಣಬಲ ಹೆಂಡದ ಬಲದ ಮೇಲೆ ಕಾಂಗ್ರೆಸ್ ಚುನಾವಣೆ ನಡೆಸುತ್ತಿದ್ದು, ಇದರ ಭಾಗವಾಗಿ ರಾಜ್ಯದ ಕೇಂದ್ರ ಬಿಂದುವಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಿನೇ ದಿನೇ ಕಾಂಗ್ರೆಸ್ ನಾಯಕರ ವರ್ತನೆ ಬದಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದಾದ್ಯಂತ ಗೂಂಡಾಗಿರಿ ನಡೆಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಇದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬಗ್ಗುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಬೆದರಿಕೆಗಳನ್ನು ಎದುರಿಸಲು ನಮ್ಮ ಕಾರ್ಯಕರ್ತರು ಸಿದ್ದರಿದ್ದಾರೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಕೆಲವಡೆ ಪ್ಯಾರಾಮಿಲಿಟರಿ ಸೇನೆ ನಿಯೋಜನೆ ಮಾಡುವಂತೆ ಚುನಾವಣೆ ಆಯೋಗಕ್ಕೆ ಪತ್ರ ಬರೆದು ತಿಳಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗ್ಯಾರಂಟಿಗಾಗಿ ಜನರಿಂದ ಸುಲಿಗೆ:
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯವಾಗಿ ಜನತೆ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಬಿಜೆಪಿ ಜನರ ವಿಶ್ವಾಸದ ಮೇಲೆ ಮತ ಕೇಳುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಬಡ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಬಂದ್ ಆಗಿದೆ. ವಿದ್ಯುತ್ ದರವನ್ನು 4 ರೂ.ಹೆಚ್ಚಿಸಲಾಗಿದೆ. ಹಾಲಿನ ದರವನ್ನು ಏರಿಕೆ ಮಾಡಿದ್ದರು ರೈತರಿಗೆ ಅನುಕೂಲವಾಗಿಲ್ಲ. ರೈತರು ಟ್ರಾನ್ಸ್ ಫರ್ಮರ್ ಹಾಕಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಹೈನುಗಾರಿಕೆ ಪೆÇ್ರೀತ್ಸಾಹ ನೀಡಲು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 3 ರೂ. ನೀಡಿದ್ದರು. ಆದರೆ, ಈಗ ಪೆÇ್ರೀತ್ಸಾಹ ಧನ ಸ್ಥಗಿತಗೊಂಡಿದೆ. ರಾಜ್ಯದಲ್ಲಿ 680 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. 24 ಸಾವಿರ ಕೋಟಿ ರೂ. ಎಸ್‍ಇಪಿ ಟಿಎಸ್‍ಪಿ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿ, ಮತ್ತೊಂದೆಡೆ ಟಿಕೆಟ್ ದರವನ್ನು ಹೆಚ್ಚಿಸಿದ್ದು, ಒಂದು ಕೈಯ್ಯಲ್ಲಿ ಹಣ ನೀಡಿ, ಮತ್ತೊಂದು ಕೈಯ್ಯಲ್ಲಿ ಕಿತ್ತುಕೊಂಡು ಮತದಾರರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ನಾಯಕರು ಹತಾಶೆ:
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹತಾಶರಾಗಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಆದಿ ಚುಂಚನಗಿರಿ ಸ್ವಾಮೀಜಿಯ ಆಶೀರ್ವಾದ ಪಡೆಯುತ್ತಿದ್ದಾರೆ. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸ್ವಾಮೀಜಿ ವಿಚಾರವನ್ನು ಎಳೆದು ತರುತ್ತಿದ್ದಾರೆ ಎಂದು ಹೇಳಿದರು. ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಶಾಸಕಶ್ರೀವತ್ಸ ಇನ್ನಿತರರು ಉಪಸ್ಥಿತರಿದ್ದರು.