ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ:ಬಿಎಲ್‍ಡಿಇ ಬಿ.ಎಂ. ಪಾಟೀಲ ಪಿಯು ಕಾಲೇಜ್ ಶೇ.100ರಷ್ಟು ಸಾಧನೆ
ವಿಜಯಪುರ,ಏ.11: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ.ಪಾಟೀಲ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಸಾಧನೆ ಮಾಡಿದೆ.
ಮೂರು ಜನ ವಿದ್ಯಾರ್ಥಿಗಳು ಇತ್ತಿಚೇಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲಿ ್ಲಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಶ್ರೀ ಬಿ.ಎಂ.ಪಾಟೀಲ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತುμÁರ ಜೈನ್ 591(ಶೇ. 98.50) ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 7ನೇ ಸ್ಥಾನ, ಪ್ರಿಚಾ ಪೆÇೀರ್ವಾಲ 589(ಶೇ. 98.20) ಅಂಕ ಗಳಿಸಿ ರಾಜ್ಯಕ್ಕೆ 9 ಮತ್ತು ವೃಂದಾಶ್ರೀ ತೋಶ್ನಿವಾಲ 588(ಶೇ. 98) ಅಂಕ ಗಳಿಸಿ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ.
ಈ ಬಾರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದು, ಶೇ.100ರಷ್ಟು ಫಲಿತಾಂಶ ಬಂದಿದೆ. ಈ ಪರೀಕ್ಷೆಗೆ ಹಾಜರಾದ ವಾಣಿಜ್ಯ ವಿಭಾಗದ ಒಟ್ಟು 77 ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾz Àಒಟ್ಟು 104 ವಿದ್ಯಾರ್ಥಿಗಳಲ್ಲಿ 67 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದ ಆಯುಷ ನಂದಿ ಮತ್ತು ಗಂಗಮ್ಮ ಬಿರಾದಾರ 583(ಶೇ. 97.20) ಅಂಕ ಗಳಿಸಿ ಕಾಲೇಜಿಗೆ ಪ್ರಥಮ, ವμರ್Á ಗುಂದಗಿ 581(ಶೇ. 96.80) ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಮತ್ತು ಪ್ರತಿಭಾ ವೈ 580(ಶೇ. 96.70) ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಕಾಲೇಜಿನ ಪ್ರಾಚಾರ್ಯರು, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.