ಚುನಾವಣೆ ಹಬ್ಬದಂತೆ ಆಚರಿಸಿ: ಇನಾಂದಾರ್
ಚಿಂಚೋಳಿ:ಏ.11:ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳನ್ನು ಹಬ್ಬದಂತೆ ಆಚರಿಸಬೇಕು. ಚುನಾವಣಾ ಕಾರ್ಯ ಪವಿತ್ರವಾದ ಕಾರ್ಯವಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಸಿಬ್ಬಂದ್ದಿಗಳು ಚುನಾವಣಾ ಪ್ರಕ್ರಿಯೆ ಬಗ್ಗೆ ಸರಿಯಾದ ತರಬೇತಿ ಪಡೆದುಕೊಳ್ಳಿ. ಮತಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ಪರಿಪೂರ್ಣ ಜ್ಞಾನ ಪಡೆದುಕೊಳ್ಳಿ ಎಂದು ಬೀದರ ಲೋಕಸಭಾ ಕ್ಷೇತ್ರ, ಚಿಂಚೋಳಿ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಸಂತೋಷ ಇನಾಂದಾರ್ ಹೇಳಿದರು. ಚಂದಾಪೂರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರ ಉದ್ಘಾಟಿಸಿ ಹೇಳಿದರು. ತಹಸೀಲ್ದಾರ ಮಲ್ಲಿಕಾರ್ಜುನ ಅರಿಕೇರಿ, ಗ್ರೇಡ್ -2 ತಹಸೀಲ್ದಾರ ವೆಂಕಟೇಶ ದುಗ್ಗನ, ಜಿಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು. ಮಾಸ್ಟರ್ ಟ್ರೇನರ್ ಪೆÇ್ರ.ಮಲ್ಲಿಕಾರ್ಜುನ ಪಾಲಾಮೂರ್ ಚುನಾವಣೆ ಕುರಿತು ತರಬೇತಿ ನೀಡಿದರು. ರಾವಸಾಬ್ ಬಜಂತ್ರಿ ಸ್ವಾಗತಿಸಿ, ನಿರೂಪಿಸಿದರು.