ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಚಿವ ಡಾ.ಎಸ್ ಆರ್ ಪಾಟೀಲ್ ಬಾಗಿ
ಸೇಡಂ,ಎ,11: ಪಟ್ಟಣದಲ್ಲಿಂದು ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ರಂಜಾನ್ ಹಬ್ಬದ ಪ್ರಯುಕ್ತವಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಸ್ಥಳಕ್ಕೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭಾಗಿಯಾಗಿ ಒಬ್ಬರಿಗೊಬ್ಬರು ಆತ್ಮೀಯತೆಯಿಂದ ಅಪ್ಪಿಕೊಂಡು ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. ಈ ವೇಳೆಯಲ್ಲಿ ಖ್ಯಾತ ಯುವ ಉದ್ಯಮಿ, ಸಮಾಜ ಸೇವಕ ಅಬ್ದುಲ್ ಹಫೀಸ್ ಆರ್ ರಂಜೋಳ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗೇಶ್ವರರಾವ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣ ರೆಡ್ಡಿ ಪಾಟೀಲ್, ಮಾಜಿ ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಬ್ಲಾಕ್ ಕಾಂಗ್ರೆಸ್ ಯುವ ಅಧ್ಯಕ್ಷ ಭೀಮಾಶಂಕರ ಕೋಳ್ಳಿ, ಅನೇಕ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.