ಬೈಂದೂರಿನಲ್ಲಿ ಈಶ್ವರಪ್ಪ ಬಿರುಸಿನ ಪ್ರಚಾರ

ಸಂಜೆವಾಣಿ ವಾರ್ತೆ
ಬೈಂದೂರು.ಏ.೧೧: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದರು.ಪ್ರಚಾರಕ್ಕೂ ಮೊದಲು ಈಶ್ವರಪ್ಪ ಕೊಲ್ಲೂರಿಗೆ ತೆರಳಿ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದರು. ದೇವರ ಕುಂದ, ನೆಂಪು, ಬಗ್ವಾಡಿ ಕ್ರಾಸ್, ಕಂಚಕೋಡು, ನಾಗೂರು, ಉಪ್ಪುಂದ, ಬೈಂದೂರು, ಶಿರೂರು ಗ್ರಾಮಗಳಿಗೆ ತೆರಳಿ ಕಾರ್ಯಕರ್ತ ಸಭೆ ನಡೆಸಿ ಚುನಾವಣಾ ಪೂರ್ವ ಭಾವಿ ಸಭೆ ನಡೆಸಿದರು. ಗ್ರಾಮಸ್ಥರನ್ನು ಉದ್ದೇಶಿಸಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಪ್ಪ ಮಕ್ಕಳ ಹಿಡಿತದಲ್ಲಿದೆ, ಹಿಂದುತ್ವ ಪರ ಧ್ಚನಿ ಎತ್ತುವ ಸಿ.ಟಿ.ರವಿ, ಪ್ರತಾಪ್ ಸಿಂಹ, ಬಸವನಗೌಡ ಪಾಟೀಲ್ ಯತ್ನಾಳ್ ರನ್ನು ಮೂಲೆ ಗುಂಪು ಮಾಡಲಾಗಿದೆ.ಕಾರ್ಯಕರ್ತರು ನೊಂದಿದ್ದಾರೆ ತಮ್ಮ ಕಷ್ಟವನ್ನು ಹೇಳಿಕೊಳ್ಳಲಾಗದೆ ಸಂಕಟ ಪಡುತ್ತಿದ್ದಾರೆ ಎಂದರು.