ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೆ ಶಾಸಕ ಪಾಟೀಲ ಸಲಹೆ
ಆಳಂದ:ಸೆ.೨೦: ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ೧೦ ಕೋಟಿ ರೂ. ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಈ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ನೀಡುವ ವಿಶ್ವಾಸವಿದೆ, ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಶಾಸಕರಾದ ಬಿ.ಆರ್. ಪಾಟೀಲ್ ಹೇಳಿದರು.
ಜಿಪಂ ಕಲಬುರಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲಬರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ‍್ಯಾಲಯ ಆಳಂದ ಇವರ ಆಶ್ರಯದಲ್ಲಿ ಗುರುವಾರ ಪಟ್ಟಣದ ಮಟಕಿ ರಸ್ತೆಯಲ್ಲಿನ ತಾಲೂಕು ಸಾರ್ವಜನಿಕ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೨೦೨೪-೨೫ನೇ ಸಾಲಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಸೋಲು-ಗೆಲುವು ಪ್ರಮುಖವಾಗಿಲ್ಲ, ಪಾಲ್ಗೊಳ್ಳುವ ಮನೋಭಾವ ಮುಖ್ಯವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯವಾಗಿದೆ. ಇದರ ಬಳಕೆಯನ್ನು ಹೆಚ್ಚಿಸಲು, ಸರ್ಕಾರ, ಶಿಕ್ಷಕರು ಮತ್ತು ಪಾಲಕರು ಹೆಚ್ಚು ಪ್ರಯತ್ನಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕ್ರೀಡೆಗಳನ್ನು ಪ್ರೋತ್ಸಾಹಿಸುವ ಮೂಲಕ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ತರುವುದು ಸಾಧ್ಯವಾಗಿದೆ. ಅಲ್ಲದೆ, ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಉತ್ತಮ ಗುಣಮಟ್ಟದ ಆಹಾರ ಸೇವಿಸಬೇಕೆಂದು ಸಲಹೆ ನೀಡಿದರು. ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್ಗಳಂತಹ ಚಟುವಟಿಕೆಗಳ ಮೂಲಕ ಪಠ್ಯದ ಜೊತೆಗೆ ಪಠ್ಯೇತರ ಚುಟುವಟಿಕೆಗಳಿಗೆ ಒತ್ತು ನೀಡಬೇಕು. ಆಗ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಹೆಚ್ಚಿಸುವ ಕೆಲಸವಾಗಲಿ ಎಂದು ಸಲಹೆ ನೀಡಿದರು. ಖೇಡ ಉಮ್ಮರಗಾದ ಶಾಲೆಯ ಶಿಕ್ಷಕ ಬಸವರಾಜ್ ಅವರು ತಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿರುವುದು ಮಾದರಿ ಕಾರ್ಯವಾಗಿದೆ ಮತ್ತು ಇಂತಹ ಕಾರ್ಯಗಳು ಎಲ್ಲ ಶಾಲೆಗಳಲ್ಲಿ ನಡೆಯಬೇಕು ಎಂದು ಅವರು, ಪೋಷಕರು ಸಹ ಮಕ್ಕಳಿಗೆ ಆದರ್ಶ ವ್ಯಕ್ತಿತ್ವವನ್ನು ರೂಡಿಸಿ, ಅವರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು ಎಂದು ಹೇಳಿದ ಶಾಸಕರು ಕ್ರೀಡಾ ಕೂಟದಲ್ಲಿ ಪಾಲ್ಗೊಂಡ ತಾಲೂಕಿನ ೩೨ ತಂಡಗಳಿಗೆ ಶುಭಕೋರಿದರು.
ವೇದಿಕೆಯಲ್ಲಿ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಡಾ. ಮಹಾಂತೇಶ ಪಾಟೀಲ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಗಡಿಗೇರ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಖಜೂರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಜಿಪಿಟಿ ಸಂಘದ ಅಧ್ಯಕ್ಷ ಜೀತೆಂದ್ರ ತಳವಾರ, ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ ಗುಣಗಕಿ, ಶಿಕ್ಷಕರ ಎಸಿಎಸ್ಟಿ ಸಂಘದ ಅಧ್ಯಕ್ಷ ದತ್ತಪ್ಪ ಸುಳ್ಳನ್, ಲಕ್ಷಿö್ಮÃಕಾಂತ ಬೀದಿ, ವಿನೋಧ ಕುಲಕರ್ಣಿ, ಅದಾನಿತ ಸಂಘದ ಅಧ್ಯಕ್ಷ ಮಲ್ಲಿನಾಥ ಮುನೋಳಿ, ಗುಂಡಪ್ಪ ಪಿ. ಜಮಾದಾರ, ಕಾರ್ಯದರ್ಶಿ ನಾಗಪ್ಪ ಎಸ್. ದೇವಂತಗಿ, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿನಾಥ ಘೋಡಕೆ, ಅಕ್ಷರ ದಾಸೋಹ ಅಧಿಕಾರಿ ಚಂದ್ರಕಾAತ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸಪ್ಪ ವಡಗಾಂವ, ವಸುಧಾ ಟಂಗೊಳ್ಳಿ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ. ಹಳ್ಳದ ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ ವಂದಿಸಿದರು. ಸಂಗೀತಾ ಡಿಜೆ ಕ್ರೀಡಾ ಪ್ರತಿಜ್ಞಾ ಬೋಧಿಸಿದರು. ಡಾ. ನುರಜಾಹ ಪ್ರಾರ್ಥನೆ ಹಾಡಿದರು.
ಬಳಿಕ ವಿವಿಧ ಶಾಲೆಗಳಿಂದ ಆಗಮಿಸಿದ್ದ ಕ್ರೀಡಾ ತಂಡಗಳಿAದ ಕ್ರೀಡಾ ಸ್ಪರ್ಧೆಯನ್ನು ನಡೆಯಿತು. ತೀರ್ಪುಗಾರರು ಮತ್ತು ದೈಹಿಕ ಶಿಕ್ಷಕ ಪಡೆ ನಡೆಸಿಕೊಟ್ಟಿತು.