ಮಳೆ, ಬೆಳೆ ಸಮೃದ್ದವಾಗಲು ಎಲ್ಲರೂ ಪ್ರಾರ್ಥಿಸೋಣ : ಶಾಸಕಿ ಎಂ.ಪಿ.ಲತಾ.

ಸಂಜೆವಾಣಿವಾರ್ತೆ
ಹರಪನಹಳ್ಳಿ.ಏ.11; ಶ್ರದ್ಧಾ ಭಕ್ತಿಯ ಪವಿತ್ರ ರಂಜಾನ್ ಹಬ್ಬವನ್ನು ಪಟ್ಟಣದಲ್ಲಿ ಗುರುವಾರ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ಮುಸ್ಲಿಂ ಬಾಂಧವರ ಒಂದು ತಿಂಗಳ ಕಾಲ ಉಪವಾಸ ಅಂತ್ಯಗೊAಡಿತು. ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಟ್ಟಣದ ಮೂರು ಕಡೆಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸುವ ಮೂಲಕ ರಂಜಾನ್ ಹಬ್ಬದ ಮೆರಗು ಹೆಚ್ಚಿಸಿದರು.ಹೊಸಪೇಟೆ ರಸ್ತೆಯ ತರಳಬಾಳು ಕಲ್ಯಾಣ ಮಂಟಪ ಹಿಂಭಾಗ ದರ್ಗಾದಲ್ಲಿ ಆಲಿ ಆದೀಸ್ ಪಂಗಡದ ಮುಸ್ಲಿಂ ಬಾಂಧವರು ಬೆಳಗ್ಗೆ 8.30ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹಡಗಲಿ ರಸ್ತೆಯ ದರ್ಗಾದಲ್ಲಿ ಅಲಿ ಸುನ್ನಿ ಪಂಗಡದವರು 9.30ರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಎಚ್.ಪಿ.ಎಸ್ ಕಾಲೇಜು ಹಿಂಭಾಗ ಹಕ್ ಸಮಿತಿಯವರು 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸ್ಥಳಕ್ಕೆ ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ ಬೇಟಿ ನೀಡಿ ಶುಭಾಶಯ ಕೋರಿ ಮಾತನಾಡಿದ ಅವರು ತಾಲೂಕಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಇರುವುದಿಲ್ಲ, ಚುನಾವಣೆ ನಂತರ ಕೊಟ್ಟ ಮಾತಿನಂತೆ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು.ರಂಜಾನ್ ಹಿನ್ನೆಲೆ ಬೆಳಗ್ಗೆಯಿಂದಲೇ ಮಕ್ಕಳು, ಮೊಮ್ಮಕ್ಕಳು, ಸ್ನೇಹಿತರು, ಸಂಬAಧಿಗಳೊAದಿಗೆ ಮಸೀದಿಗಳಿಗೆ ತೆರಳಿದ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಬಡವರಿಗೆ ಬಟ್ಟೆ, ಆಹಾರ ಸಾಮಾಗ್ರಿ, ಹಣವನ್ನು ದಾನವಾಗಿ ನೀಡಿದರು.