ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಏ.11:ತಾಲ್ಲೂಕಿನ ಶೀಳನೆರೆ ಹೋಬಳಿಯ ಸಿಂಧಘಟ್ಟ ಗ್ರಾಮದ ಮಂಜೇಗೌಡ ಹಾಗೂ ಕಮಲ ದಂಪತಿಗಳ ಪುತ್ರಿ ಮತ್ತು ಗ್ರಾಮೀಣ ಪ್ರತಿಭೆ ಎಸ್.ಎಂ.ಪ್ರೀತಿ ಪಟ್ಟಣದ ಕದಂಬ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 587 ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲ ಕಿರಣ್ ತಿಳಿಸಿದ್ದಾರೆ.
ತಾಲ್ಲೂಕಿಗೆ ಅಧಿಕ ಅಂಕಗಳನ್ನು ಗಳಿಸಿದ ಎಸ್.ಎಂ.ಪ್ರೀತಿ ಅವರನ್ನು ಶಾಸಕ ಹೆಚ್.ಟಿ.ಮಂಜು. ಕ್ಷೇತ್ರಶಿಕ್ಷಣಾಧಿಕಾರಿ ಆರ್,ಎಸ್.ಸೀತಾರಾಮು, ಸಮನ್ವಯಾಧಿಕಾರಿ ಮಂಜುನಾಥ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು ಸೇರಿದಂತೆ ಹಲವರು ಅಭಿನಂದನೆ ತಿಳಿಸಿದ್ದಾರೆ.