12 ರಂದು ರಾಧಾಕೃಷ್ಣ ದೊಡ್ಮನಿ ನಾಮಪತ್ರ
ಕಲಬುರಗಿ,ಏ.10-ಗುಲಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿಯವರು ಏ.12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಂತರ ಅವರು 11-30ಕ್ಕೆ ನಗರದ ನೂತನ ವಿದ್ಯಾಲಯ (ಎನ್.ವಿ) ಆಟದ ಮೈದಾನದಲ್ಲಿ ಏರ್ಪಡಿಸಲಾದ ಕಾಂಗ್ರೆಸ್ ಚುನಾವಣಾ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ರಾಷ್ಟ್ರ ಹಾಗೂ ರಾಜ್ಯ ನಾಯಕರು, ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರು,
ವಿಧಾನ ಪರಿಷತ್ ಸದಸರು, ನಿಗಮ/ಮಂಡಳಿ ಅಧ್ಯಕ್ಷರು ಪಾಲ್ಗೋಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.