ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಸವಕುಮಾರ ಸ್ವಾಮಿ ಅದ್ಭುತ ಸಾಧನೆ
ಬೀದರ್,ಏ.10-ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಇಲ್ಲಿನ ಮಾತೇ ಮಾಣಿಕೇಶ್ವರಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಬಸವಕುಮಾರ ಶಿವಕುಮಾರ ಸ್ವಾಮಿ ಅವರು ಶೇ.97 ರಷ್ಟು ಅಂಕ ಪಡೆದು ಅದ್ಭುತ ಸಾಧನೆ ಮಾಡುವುದರ ಮೂಲಕ ಜಿಲ್ಲೆಗೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಬಸವಕುಮಾರ ಸ್ವಾಮಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.97 ಅಂಕಗಳಿಸಿ ಫ್ಯೂಚರ್ ಕಿಡ್ಸ್ ಶಾಲೆಗೆ ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗುವ ಮೂಲಕ ಅದ್ಭುತ ಸಾಧನೆ ಮಾಡಿದ್ದರು. ವಿದ್ಯಾರ್ಥಿಯ ಈ ಸಾಧನೆಯನ್ನು ಗುರುತಿಸಿ ಮಾತೇ ಮಾಣಿಕೇಶ್ವರಿ ಪದವಿ ಪೂರ್ವ ಮಹಾವಿದ್ಯಾಲಯವು ಉಚಿತ ಪ್ರವೇಶಾವಕಾಶ ಕಲ್ಪಿಸಿತ್ತು. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಶೇ.97 ಅಂಕ ಪಡೆದು ಅದ್ಭುತ ಸಾಧನೆ ಮಾಡಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬಸವಕುಮಾರ ಸ್ವಾಮಿ ಅವರ ಸಾಧನೆಗೆ ಅವರ ತಂದೆಯವರಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.