ಶೀಲ ಶಂಕಿಸಿ ಪತ್ನಿಯ ಬರ್ಬರ ಹತ್ಯೆ
ವಿಜಯಪುರ,ಏ.10:ಶೀಲ ಶಂಕಿಸಿ ಪತಿಯೊಬ್ಬ ಪತ್ನಿಯನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಬಲೇಶ್ವರ ತಾಲೂಕಿನ ಕಂಬಾಗಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬಬಲೇಶ್ವರ ತಾಲೂಕಿನ ಕಂಬಾಗಿ ಗ್ರಾಮದ ಯಲ್ಲವ್ವ ಗಳವೆ (40) ಕೊಲೆಗೀಡಾದ ಮಹಿಳೆ.
ಮಂಗಳವಾರ ಮಧ್ಯಾಹ್ನ ಯಲ್ಲವ್ವ ಹಾಗೂ ಗಂಡ ಸಾಬು ಗಳವೆ ಮಧ್ಯ ಪತ್ನಿ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕಲಹ ನಡೆದಿದೆ. ಇಬ್ಬರ ಕಲಹ ವಿಕೋಪಕ್ಕೆ ಹೋಗಿ ಮಾರಕಾಸ್ತ್ರಗಳಿಂದ ಪತಿ ಸಾಬು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಯಲ್ಲವ್ವ ಸಾವನಪ್ಪಿದ್ದಾಳೆ. ಈ ವೇಳೆ ಜಗಳ ಬಿಡಿಸಲು ಮುಂದಾದ ಅತ್ತೆ ಸೌರವ್ವಳಿಗೂ ಸಾಬು ಹೊಡೆದು ಗಾಯಗೊಳಿಸಿದ್ದಾನೆ. ಗಾಯಗೊಂಡಿರುವ ಅತ್ತೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸಾಬು ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.