ಜಿಲ್ಲಾ ಕಸಾಪ: ಭೀಮ ಯಾನ ಏ. 12 ರಿಂದ
ಕಲಬುರಗಿ: ಏ.10:ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ಸಂವಿಧಾನ ಬರೆದು ದೇಶದ ಎಲ್ಲ ಜನಾಂಗದವರಿಗೆ ಸಮಾನ ಅವಕಾಶ ಕಲ್ಪಿಸಿಕೊಟ್ಟಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಇಂದಿನ ಹೊಸ ಪೀಳಿಗೆಗೆ ಮುಟ್ಟಿಸುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏ.12 ರಿಮದ ಜಿಲ್ಲೆಯಾದ್ಯಂತ ಭೀಮ ಯಾನ ಎಂಬ ವಿಶೇಷ ಚಳವಳಿ ರೂಪದ ಕಾರ್ಯಕ್ರಮವೊಂದನ್ನು ರೂಪಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಬಾಬಾಸಾಹೇಬರ ವೈಚಾರಿಕ ಚಿಂತನೆಗಳಿಂದ ಮಾತ್ರ ಸ್ವಾಸ್ಥ್ಯ ಸಮಾಜವನ್ನು ಕಟ್ಟಲು ಸಾಧ್ಯ ಎಂಬ ವಿಶ್ವಾಸದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಏ. 12 ರ ಬೆಳಗ್ಗೆ 11.15 ಕ್ಕೆ ನಗರದ ನಾಗನಳ್ಳಿ ರಿಂಗ್ ರಸ್ತೆಯಲ್ಲಿರುವ ಆರ್ಯನ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಭೀಮ ಯಾನ ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾಲೇಜಿನ ಪ್ರೀನ್ಸಿಪಾಲ್ ಡಾ. ಗೋಲಪ್ಪ ರಾಜಾಪೂರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಉಪಸ್ಥಿತರಿರುವರು. ಸಮಕಾಲೀನ ಭಾರತದಲ್ಲಿ ಡಾ. ಅಂಬೇಡ್ಕರ್ ಚಿಂತನೆಗಳು ಕುರಿತು ಸಾಹಿತಿ ಜಗನ್ನಾಥ ಎಲ್ ತರನಳ್ಳಿ, ಡಾ. ಅಂಬೇಡ್ಕರ್ ದೃಷ್ಟಿಯಲ್ಲಿ ಸಾಮಾಜಿಕ ನ್ಯಾಯದ ಕುರಿತು ಸಂಸ್ಕøತಿ ಚಿಂತಕ ವಿಠ್ಠಲ ವಗ್ಗನ್, ಡಾ. ಅಂಬೇಡ್ಕರ್ ಮತ್ತು ಮಹಿಳಾ ಸಬಲೀಕರಣ ಕುರಿತು ಪ್ರಾಧ್ಯಾಪಕಿ ಡಾ. ಸಾರಿಕಾದೇವಿ ಕಾಳಗಿ ಅವರು ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ದರ್ಮಣ್ಣ ಎಚ್ ಧನ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.