ಪತ್ನಿ ಕೊಂದ ಪತಿ ಸೆರೆ
ಬೆಂಗಳೂರು, ಏ.೧೦- ಮದ್ಯಪಾನ ಚಟ ಅಂಟಿಸಿಕೊಂಡು ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿದ ಪತಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಮಾಕ್ಷಿಪಾಳ್ಯದ ರಂಗನಾಥಪುರದ ವೆಂಕಟೇಶ್(೩೮)ಬಂಧಿತ ಆರೋಪಿಯಾಗಿದ್ದು,ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಕಳೆದ ಏ.೬ ರಂದು ರಾತ್ರಿ ೧೦-೩೦ರ ವೇಳೆ ಕುಡಿದು ಬಂದು ನೇತ್ರಾವತಿ ಜೊತೆ ಜಗಳ ತೆಗೆದು ಸೀರೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದನು.
ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ, ಕುಡಿತದ ಚಟ ಅಂಟಿಸಿಕೊಂಡ ಆರೋಪಿಯು ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ ಮತ್ತವರ ಸಿಬ್ಬಂದಿ ಆರೋಪಿಯನ್ನು ಕೊಲೆ ನಡೆದ ದಿನದಂದೇ ಬಂಧಿಸಿದ್ದಾರೆ ಎಂದು ಹೇಳಿದರು.