ಏ.13 ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಧಾರವಾಡ,ಏ10: ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ದಿನದಂದು ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿ, ಸಿಬ್ಬಂದಿಗಳಿಗೆ ನೇಮಿಸಿ, ಈಗಾಗಲೇ ಆದೇಶ ಪತ್ರ ನೀಡಲಾಗಿದೆ. ಏಪ್ರಿಲ್ 13 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಆದೇಶ ಪತ್ರದಲ್ಲಿ ತಿಳಿಸಿರುವ ಸ್ಥಳಗಳಿಗೆ ಕಡ್ಡಾಯವಾಗಿ ಹಾಜರಾಗಿ, ತರಬೇತಿ ಪಡೆಯಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಿ, ಈಗಾಗಲೇ ಆದೇಶ ಜಾರಿ ಮಾಡಲಾಗಿದೆ. ಕೆಲವರು ಆರೋಗ್ಯ ಮತ್ತು ಇತರ ಕಾರಣಗಳಿಗಾಗಿ ಕರ್ತವ್ಯದಿಂದ ವಿನಾಯಿತಿ ಕೇಳಿದ್ದಾರೆ. ಇಂತಹ ಅರ್ಜಿಗಳನ್ನು ಚುನಾವಣಾ ಆಯೋಗದ ನಿಯಮಗಳ ಅನುಸಾರ ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪಿ.ಆರ್.ಓ., ಎಪಿ.ಆರ್.ಓ ಮತ್ತು ಪಿ.ಓ.ಗಳು ಕರ್ತವ್ಯಕ್ಕೆ ನಿಯೋಜಿಸಿ ಆದೇಶಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಏಪ್ರಿಲ್ 13 ರಂದು ತರಬೇತಿಗೆ ಕಡ್ಡಾಯವಾಗಿ ಹಾಜರಾಗಬೇಕು. ನಿಯಮಾನುಸಾರ ಕರ್ತವ್ಯದಿಂದ ವಿನಾಯಿತಿ ನೀಡಿದವರ ಬಗ್ಗೆ ಆಯಾ ಸಹಾಯಕ ಚುನಾವಣಾಧಿಕಾರಿಗಳು ಮಾಹಿತಿ ನೀಡುತ್ತಾರೆ.
ಆದರೆ ಕರ್ತವ್ಯಕ್ಕೆ ವಿನಾಯಿತಿ ಕೇಳಿ ಅರ್ಜಿ ಸಲ್ಲಿಸಿದ್ದೇನೆ, ರದ್ದಾಗುವ ಭರವಸೆ ಇದೆ ಎಂದು ತಮ್ಮಷ್ಟಕ್ಕೆ ತಾವೇ ಭಾವಿಸಿ ತರಬೇತಿಗೆ ಯಾರೂ ಗೈರು ಉಳಿಯಬಾರದು ಎಂದು ಅವರು ತಿಳಿಸಿದ್ದಾರೆ.
ಮತಗಟ್ಟೆಯ ಅಧಿಕಾರಿಗಳ ತರಬೇತಿ ಸ್ಥಳಗಳು: ಧಾರವಾಡ ಲೋಕಸಭೆ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತಗಟ್ಟೆಗಳಲ್ಲಿ ಮೇ 7 ರಂದು ಕರ್ತವ್ಯ ನಿರ್ವಹಿಸಲು ನೇಮಕಗೊಂಡಿರುವ ಪಿ.ಆರ್.ಓ., ಎ.ಪಿ.ಆರ್.ಓ ಮತ್ತು ಪಿ.ಓ.ಗಳಿಗೆ ಆಯಾ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಏಪ್ರಿಲ್ 13 ರಂದು ಮೊದಲ ಹಂತದ ತರಬೇತಿ ನೀಡಲು ಕ್ರಮ ವಹಿಸಲಾಗಿದೆ.
್ಯ