ಪ್ರತಿಜ್ಞಾವಿಧಿ ಬೋಧನೆ
ಗದಗ,ಏ10: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾ ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಿ.ಬಿ. ದೇವರಮನಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ , ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶ್ರೀಮತಿ ಅರುಂದತಿ ಕುಲಕರ್ಣಿ ಸೇರಿದಂತೆ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.