ಸಚಿವ ಸುರೇಶ್‌ರಿಂದ ವಸತಿ ನಿಲಯ ಕಟ್ಟಡ ಉದ್ಘಾಟನೆ
ಕೋಲಾರ,ಸೆ,೨೦:ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ್ ಅವರು ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ಬೆಂಗಳೂರು ವತಿಯಿಂದ ೨೦೧೩-೨೪ನೇ ಸಾಲಿನ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ಸುಮಾರು ರೂ.೨ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟನೆ ಮಾಡಿದರು.
ಅವರೊಂದಿಗೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್, ಕೋಲಾರ ಶಾಸಕರಾದ ಕೊತ್ತೂರ್ ಜಿ ಮಂಜುನಾಥ, ವಿಧಾನ ಪರಿಷತ್ ಸದಸ್ಯರು ಎಂ. ಎಲ್. ಅನಿಲಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷಧಿಕಾರಿ ಬಿ. ನಿಖಿಲ್, ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ, ಬೆಂಗಳೂರು ಹೆಚ್.ಎ.ಎಲ್ ಸಂಸ್ಥೆಯ ಎಜಿಎಂ ಸಿ.ಕೆ ಮಂಜುನಾಥ್, ಡಿಜಿಎಂ ಸಾಯಿ ಕೃಷ್ಣ ಹಾಗೂ ಮುಖ್ಯ ವ್ಯವಸ್ಥಾಪಕರು ಶ್ರೀನಿವಾಸ್ ಅವರು ಸೇರಿದಂತೆ ಮತ್ತಿತರರು ಇದ್ದರು.