ಸದೃಡ ದೇಶದ ನಿರ್ಮಾಣಕ್ಕೆ ಯುವಶಕ್ತಿಯ ಕೊಡುಗೆ ಅನನ್ಯ: ರಿಶಿ ಆನಂದ
ಸಂಜೆವಾಣಿ ವಾರ್ತೆ,
ವಿಜಯಪುರ,ಏ.10: ಒಂದು ದೇಶದ ಶಕ್ತಿಶಾಲಿ ಸಂಪನ್ಮೂಲ ಎಂದರೆ ಅದು ಯವಶಕ್ತಿ. ದೇಶಕ್ಕೆ ಯುವಕರ ಕೊಡುಗೆ ಅತ್ಯಂತ ಮಹತ್ವದಾಗಿದೆ. ದೇಶದ ಭವಿಷ್ಯ ನಿರ್ಮಾಣ ಕಾರ್ಯಕ್ಕೆ ಎಲ್ಲಾ ಯುವಕರು ಲೋಕಸಭಾ ಚುನಾವಣೆಯಲ್ಲಿ ಪಾರದರ್ಶಕ ಹಾಗೂ ಮುಕ್ತವಾಗಿ ಮತದಾನ ಮಾಡುವ ಮೂಲಕ ಸದೃಢÀ ದೇಶ ನಿರ್ಮಾಣಕ್ಕೆ ಕಾರಣೀಭೂತರಾಗಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಕ್ರೀಡಾ ಇಲಾಖೆಯ ಯುವ ಕ್ರೀಡಾಪಟುಗಳೊಂದಿಗೆ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಟವನ್ನು ಗೆಲ್ಲಬೇಕಾದರೆ ಹೇಗೆ ಸತತ ಪರಿಶ್ರಮ ಪಡುತ್ತೇವೆಯೋ ಹಾಗೆ ಸ್ವಚ್ಚ ಹಾಗೂ ನ್ಯಾಯಸಮ್ಮತ ಆಡಳಿತ ನಿರ್ಮಾಣವಾಗಲು ಯೋಗ್ಯ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ಯುವಶಕ್ತಿ ಮುಂದಾಗಬೇಕು. ಅದಲ್ಲದೇ ತಮ್ಮ ಕುಟುಂಬ, ನೆರೆಹೊರೆಯವರಿಗೆ ಮತದಾನದ ಮಹತ್ವ ತಿಳಿಸಿ ಕಡ್ಡಾಯ ಮತದಾನ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದರು.
ಮತದಾನ ಮಾಡುವ ಮೂಲಕ ನಿಮ್ಮದೇ ಆದ ಕೊಡುಗೆಯನ್ನು ನೀಡಬೇಕು. ಮೊಟ್ಟಮೊದಲ ಬಾರಿಗೆ ಮತದಾನ ಮಾಡುತ್ತಿರುವ ನೀವು ಯಾವುದೇ ಭಯವಿಲ್ಲದೆ, ನಿರ್ಭೀತರಾಗಿ ಮತದಾನ ಮಾಡಿ. ನೀವμÉ್ಟೀ ಅಲ್ಲದೆ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ನಿಮ್ಮ ಸ್ನೇಹಿತರಿಗೂ ಕೂಡ ಚುನಾವಣೆ ದಿನದಂದು ಮತದಾನ ಮಾಡಲು ಪ್ರೇರೇಪಣೆ ನೀಡಬೇಕು. ಎಲ್ಲ ಮತದಾರರಿಗೆ ನೀವು ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.
ರನ್ನಿಂಗ್ ಮಾಡಿ ಮತದಾನ ಜಾಗೃತಿ ಮೂಡಿಸಿದ ಜಿಪಂ ಸಿಇಒ
ನಂತರ ಸಿಇಒ ರಿಶಿ ಆನಂದ ಅವರು, ಎಲ್ಲ ಕ್ರೀಡಾಪಟುಗಳೊಂದಿಗೆ ಕ್ರೀಡಾಂಗಣದಲ್ಲಿ 800 ಮೀಟರ್ ರನ್ನಿಂಗ್ ಮಾಡುವ ಮೂಲಕ ಎಲ್ಲಾ ಕ್ರೀಡಾಪಟುಗಳಿಗೆ ಮಾದರಿಯಾದರು. ಕ್ರೀಡಾಪಟುಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದರು. ಈ ಸಂದರ್ಭದಲ್ಲಿ ಎಲ್ಲ ಕ್ರೀಡಾಪಟುಗಳು ಅತ್ಯಂತ ಉತ್ಸಾಹ ಮತ್ತು ಆಸಕ್ತಿಯಿಂದ ಸಿಇಒ ಅವÀರೊಂದಿಗೆ ಬೆರೆತು ರನ್ನಿಂಗ್‍ನಲ್ಲಿ ಭಾಗವಹಿಸಿದರು. ಇದೇ ರೀತಿ ಎಲ್ಲರೂ ಅತ್ಯಂತ ಉತ್ಸಾಹದಿಂದ ಹಾಗೂ ಸಂತಸದಿಂದ ಮತದಾನದ ದಿನದಂದು ತಪ್ಪದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.
ಬಳಿಕ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ. ಆರ್. ಮುಂಡರಗಿ ಅವರು ಮಾತನಾಡಿ, ಪ್ರಪಂಚದಲ್ಲೇ ಅತ್ಯಂತ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ಭಾರತ. ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ದೇಶ ಎಂದು ಪ್ರಪಂಚವೇ ನಮ್ಮತ್ತ ಕೈ ಬೀಸಿ ಹೇಳುತ್ತದೆ. ಅದಕ್ಕಾಗಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವುದು ಮತ್ತು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆ 2024ರಂದು ಕಡ್ಡಾಯವಾಗಿ ಮತ್ತು ಖಚಿತವಾಗಿ ಮತದಾನ ಮಾಡುವ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ ಎಂದರು.
ಈ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ಮತದಾರರಿಗೆÀ ಪ್ರತಿಜ್ಞಾ ವಿಧಿ ಬೋಧಿಸಿದರು. ಸಾಕ್ಷಿ ಹಿರೇಮಠ ಅವರು ಮತದಾನದ ಜಾಗೃತಿ ಕುರಿತ ಗೀತೆಗಳನ್ನು ಹಾಡುವ ಮೂಲಕ ಎಲ್ಲ ಕ್ರೀಡಾಪಟುಗಳಲ್ಲಿ ಮತದಾನದ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ವಿಜಯಪುರ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಹೊಂಗಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕÀ ಎಸ್. ಜಿ. ಲೋಣಿ, ಜಿಲ್ಲಾ ಎನ್.ಎಸ್.ಎಸ್ ಘಟಕದ ನೊಡೆಲ್ ಅಧಿಕಾರಿ ಪ್ರಕಾಶ ರಾಠೋಡ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಹನಾ ಕುಡಿಗನೂರ, ಜಿಲ್ಲೆಯ ಅಥ್ಲೆಟಿಕ್ ಕ್ರೀಡಾಕೂಟಗಳ ಕೋಚ್‍ಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿ ಮತು ಸಿಬ್ಬಂದಿಯವರು, ಕ್ರೀಡಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.