ಕರಪತ್ರ ಹಂಚಿ ಮತದಾರರಿಗೆ ಅರಿವು ಮೂಡಿಸಿದ ಜಿ.ಪಂ. ಸಿಇಒ ರಿಶಿ ಆನಂದ
ಸಂಜೆವಾಣಿ ವಾರ್ತೆ,
ವಿಜಯಪುರ,ಏ.10: ಸುಭದ್ರ ದೇಶ ನಿರ್ಮಾಣಕ್ಕೆ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಲೋಕಸಭೆ ಚುನಾವಣೆಯನ್ನು ಯಶಸ್ವಿಗೊಳಿಸಿ ಉತ್ತಮ ಆಡಳಿತ ಪಡೆಯಲು ನಾಗರಿಕರ ಸಹಕಾರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ಹಾಗೂ ವಿಜಯಪುರ ವಿಭಾಗೀಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕೇಂದ್ರ ಬಸ್ ನಿಲ್ದಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣಗಳಲ್ಲಿ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಯಾಣಿಕರೊಂದಿಗೆ ಮಾಹಿತಿ ವಿನಿಮಯ ನೀಡಿ ಅವರು ಮಾತನಾಡಿದರು.
ಚುನಾವಣಾ ಆಯೋಗ ಗುರುತು ಮಾಡಿರುವ ದಾಖಲೆಗಳೊಂದಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಹಿರಿಯರು, ವಿಶಿಷ್ಟ ಚೇತನರಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಯಾವುದೇ ಗೊಂದಲ ಉಂಟಾಗದಂತೆ ನಾಗರಿಕರು ಶಾಂತ ರೀತಿಯಿಂದ ಸಹಕರಿಸಿ ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ರಿಶಿ ಆನಂದ ಅವರು ಬಸ್ ನಿಲ್ದಾಣಗಳಲ್ಲಿ ಮತದಾನ ಜಾಗೃತಿ ಕುರಿತ ಪೆÇೀಸ್ಟರ್‍ಗಳನ್ನು ಗೋಡೆಗಳ ಮೇಲೆ ಅಂಟಿಸಿದರು. ಇದೇ ವೇಳೆ ಸಾರ್ವಜನಿಕರಿಗೆ, ಯುವ ಮತದಾರರಿಗೆ ಹಾಗೂ ಹಿರಿಯ ನಾಗರಿಕರಿಗೆ ಮತದಾನದ ಜಾಗೃತಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಹಂಚುವ ಮೂಲಕ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿದ ಸಿ. ಆರ್ ಮುಂಡರಗಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ.ಬಿ ಅಲ್ಲಾಪೂರ, ವಿಜಯಪುರ ತಾಲೂಕು ಪಂಚಾಯತಿು ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಕೇಂದ್ರ ಬಸ್ ನಿಲ್ದಾಣ ಅಧಿಕಾರಿ ಜೆ.ಕೆ. ಹುಗ್ಗೆಣ್ಣವರ, ಜಿಲ್ಲಾ ಎನ್.ಎಸ್.ಎಸ್ ಘಟಕದ ನೊಡೆಲ್ ಅಧಿಕಾರಿ ಪ್ರಕಾಶ ರಾಠೋಡ, ಜಿ.ಪಂ. ಎಎಸೈ ರಾವ್ ಬಹಾದ್ದೂರ್ ಬಾಗವಾನ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಸೇರಿದಂತೆ ಪ್ರಯಾಣಿಕರು, ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಉಪಸ್ಥಿತರಿದ್ದರು.