ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ, ಜಿಲ್ಲಾ ಚುನಾವಣಾಧಿಕಾರಿಗಳಿಂದ ಮತಸಂಕಲ್ಪ

ಸಂಜೆವಾಣಿ ವಾರ್ತೆ
ದಾವಣಗೆರೆ ಏ.8; ಲೋಕಸಭಾ ಚುನಾವಣೆ ಅಂಗವಾಗಿ ಏಪ್ರಿಲ್ 6 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮೆಟ್ಟಿಲುಗಳ ಮುಂಭಾಗದಲ್ಲಿ ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಮತದಾನ ಸಂಕಲ್ಪ ಮಾಡಲಾಯಿತು. ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎA.ವಿ ಮತದಾರರ ಸಂಕಲ್ಪ ವಿಧಿಯನ್ನು ಬೋಧಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು, 18 ವರ್ಷ ಮೇಲ್ಪಟ್ಟ, ಮತದಾರರಾಗಿರುವ ಪ್ರತಿಯೊಬ್ಬರೂ ತಪ್ಪದೇ ಮೇ.7 ರಂದು ಮತದಾನ ಮಾಡಿ ಶೇಖಡಾವಾರು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಇದರಿಂದ ಪ್ರಜಾಪ್ರಭುತ್ವ ಯಶಸ್ಸಿಗಾಗಿ ಕೈಗೊಂಡ ಕರ್ತವ್ಯವಾಗುತ್ತದೆ. 85 ವರ್ಷ ವಯೋಮಾನದವರು ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಇದೆ. ಅವರು ಇರುವ ಸ್ಥಳಗಳಿಗೆ ಬಂದು ಮತದಾನ ಮಾಡಿಸಲಾಗುವುದು. ದೇಶದ ಅಭಿವೃದ್ಧಿಗೆ ಒಂದೊAದು ಮತವೂ ಮಹತ್ವದ್ದಾಗಿದ್ದು, ಈ ಬಗ್ಗೆ ತಾತ್ಸಾರ ಮಾಡದೆ ಸ್ವಇಚ್ಚೆಯಿಂದ ಮತಗಟ್ಟೆಗೆ ತೆರಳಿ ಮತಚಲಾಯಿಸಬೇಕು. ಈ ಮೂಲಕ ನೆರೆಹೊರೆಯವರು ಸಹ ಮತದಾನ ಮಾಡಲು ಪ್ರೇರÀಣೆ ನೀಡಬೇಕು. ಮತಗಟ್ಟೆಗೆ ಆಗಮಿಸುವ ಎಲ್ಲರಿಗೂ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗುತ್ತದೆೆ ಎಂದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸುರೇಶ್.ಬಿ.ಇಟ್ನಾಳ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಜಿ.ಪಂ. ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಶಾರದ ದೊಡ್ಡಗೌಡ್ರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
======