ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಿ
(ಸಂಜೆವಾಣಿ ವಾರ್ತೆ)
ರಾಯಚೂರು, ಏ.೮- ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಮತಕ್ಷೇತ್ರದ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು ಎಂದು ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾಧ್ಯಕ್ಷ ಮೋಸಿನ್ ಖಾನ್ ಮನವಿ ಮಾಡಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಳೆದ ಬಾರಿ ರಾಯಚೂರು ಲೋಕಸಭಾ ಮತಕ್ಷೇತ್ರದಲ್ಲಿ ಶೇ.೬೦ ರಷ್ಟು ಮಾತ್ರವೇ ಮತದಾನವಾಗಿತ್ತು. ಅದು ಈ ಸಲ ಶೇ.೯೦ ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಬ್ರಿಗೇಡ್ ಮನೆ ಮನೆ ಪ್ರಚಾರ ನಡೆಸುತ್ತಲಿದೆ. ಇಂದಿನ ಸಮಸ್ಯೆಗಳಿಗೆ ಪರಿಹಾರ ಕಾಣಬೇಕಾದರೆ ಯೋಗ್ಯವಾದವರಿಗೆ ತಪ್ಪದೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಜೀವಂತವಾಗಿಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಂಕರ್ ಬಾಬು ಉಡಮಗಲ್ ಇದ್ದರು.