ಕಡ್ಡಾಯವಾಗಿ ಮತದಾನ ಮಾಡಿ: ಜಿಲ್ಲಾಧಿಕಾರಿ ಟಿ.ಭೂಬಾಲನ್
ಸಂಜೆವಾಣಿ ವಾರ್ತೆ,
ವಿಜಯಪುರ,ಏ.8 :ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮತದಾರರ ಪ್ರತಿಜ್ಞಾವಿಧಿ ಕೋಣೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮತದಾನವು ಶೇ.100ರಷ್ಟು ಆಗಬೇಕು. ಅದಕ್ಕಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ. ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನದಲ್ಲಿ ಭಾಗಿಯಾಗಲು ಪ್ರೇರೇಪಣೆ ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ಜನತೆಗೆ ಮತದಾನ ಮಾಡಲು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ವಿಜಯಪುರ ಮಹಾನಗರ ಪಾಲಿಕೆಯ ಉಪ ಆಯುಕ್ತÀ ಮಹಾವೀರ ಬೋರಣ್ಣವರ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶಾದಉರ್ ರೆಹಮಾನ್ ಶರೀಫ್, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿÀ ಸಿ. ಆರ್. ಮುಂಡರಗಿ, ಉಪಕಾರ್ಯದರ್ಶಿ ಬಿ. ಎಸ್. ಮೂಗನೂರಮಠ, ವಿಜಯಪುರ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ತಹಸೀಲ್ದಾರÀ ಕವಿತಾ, ಜಿ.ಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ.ಬಿ. ಅಲ್ಲಾಪೂರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಶೇಖರ ಧೈವಾಡಿÀ, ಜಿ.ಪಂ. ಸಿಬ್ಬಂದಿ ಎ.ಎಸ್.ಓ ರಾವ್ ಬಹದ್ದೂರ್ ಬಾಗವಾನ, ಸುರೇಶ ಕೊಂಡಗೂಳಿ, ಸುವರ್ಣ ಭಜಂತ್ರಿ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ತಹಸೀಲ್ದಾರ ಕಾರ್ಯಾಲಯ ಸಿಬ್ಬಂದಿ ಮುಂತಾದವರು ಹಾಜರಿದ್ದರು