ಕಲ್ಲು ಎತ್ತಿ ಹಾಕಿ ಇಬ್ಬರು ಮಹಿಳೆಯರ ಬರ್ಬರ ಹತ್ಯೆ
ಕಲಬುರಗಿ:ಏ.07: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಮಹಿಳೆಯರ ಬರ್ಬರ ಹತ್ಯೆ ನಗರದ ಹೊರ ವಲಯದ ತಾವರಗೇರಾ ಬಳಿ ನಡೆದಿದೆ.
ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಯರಾದ ಶರಣಮ್ಮ(45) ಕೆಕೆ ನಗರ ನಿವಾಸಿ, ಚಂದಮ್ಮ(45) ತಾಜ್ ಸುಲ್ತಾನ್ ಪುರ ನಿವಾಸಿ ಕೊಲೆ ಆಗಿದ್ದಾರೆ
ನಗರದ ಗಂಜ್ ನಿಂದ ಬಸ್ ನಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ
ಕೊಲೆಗೆ ಕಾರಣ ತಿಳಿದು ಬಂದಿಲ್ಲ
ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಜಾರಿಯಲ್ಲಿದೆ.