ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೊಬೈಲ್, ಹಣ ದರೋಡೆ
ಕಲಬುರಗಿ,ಏ.7-ರಾತ್ರಿ 10.30ರ ಸುಮಾರಿಗೆ ಮನೆಯ ಕಡೆ ನಡೆದುಕೊಂಡು ಹೊರಟಿದ್ದ ವ್ಯಕ್ತಿಯ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿ 8 ಸಾವಿರ ರೂ.ಮೌಲ್ಯದ ವಿವೋ ಮೊಬೈಲ್ ಮತ್ತು 500 ರೂ.ನಗದು ದೋಚಿಕೊಂಡು ಹೋಗಿರುವ ಘಟನೆ ಇಲ್ಲಿನ ಚನ್ನವೀರ ನಗರದಲ್ಲಿ ನಡೆದಿದೆ.
ಮೋಹನಲಾಲ್ ಗಣೇಶಕರ (65) ಎಂಬುವವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಮತ್ತು ಹಣ ದೋಚಿಕೊಂಡು ಹೋಗಲಾಗಿದೆ.
ಸಹೋದರನ ಮಗನ ಮದುವೆಗೆಂದು ಇವರು ರಾಯಚೂರಿಗೆ ಹೋಗಿ ಮರಳಿ ಕಲಬುರಗಿಗೆ ಬಂದಿದ್ದಾರೆ. ರಾತ್ರಿ 10.30ರ ಸುಮಾರಿಗೆ ಮುಸ್ಲಿಂ ಸಂಘದ ಬಡಾವಣೆಯ ಮಾರ್ಗವಾಗಿ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ 20, 25 ಮತ್ತು 26 ವರ್ಷ ವಯಸ್ಸಿನ ಮೂವರು ಅಪರಿಚಿತರು ಇವರ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿ ಮೊಬೈಲ್ ಮತ್ತು ನಗದು ಹಣ ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.