ನವೋದಯ ಶಾಲೆಗೆ ವಿದ್ಯಾರ್ಥಿ ಆಯ್ಕೆ
ಸೇಡಂ,ಎ,06: ಪಟ್ಟಣದಲ್ಲಿರುವ ಶ್ರೀ ಸಪ್ಪಣ್ಣಾರ್ಯ ಶಿವಯೋಗಿ ಶಿಕ್ಷಣ ಸಮಿತಿಯ ವಿಶ್ವಜ್ಯೋತಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿರುವ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿ ಯಶ್ ತಂದೆ ಹುಸನಪ್ಪ ನವೋದಯ ಶಾಲೆಗೆ ಆಯ್ಕೆಯಾಗುವ ಮೂಲಕ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದುಕೊಟ್ಟಿದ್ದಾರೆ ಎಂದು ಶಿಕ್ಷಣ ಸಮಿತಿಯ ಅಧ್ಯಕ್ಷ ವಿಜಯಕುಮಾರ ಸೂರವಾರ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.