ಡಾ.ಬಾಬು ಜಗಜೀವನರಾಮ್ ಅವರ ಜಂಯತಿ ಆಚರಣೆ
ಗದಗ,ಏ6: ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಡಾ.ಬಾಬು ಜಗಜೀವನರಾಮ್ ಅವರ 117ನೇ ಜಯಂತ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು.
ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಅವರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ.ಎಸ್. ಹೆಚ್ಚುವರಿ ಪೆÇಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರವಿ ಗುಂಜೀಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಹಾಜರಿದ್ದರು.