ಕೂಡ್ಲಿಯಲ್ಲಿ ನದಿಯಲ್ಲಿ ಮುಳುಗಿ ಯುವಕ ಸಾವು

ಸಂಜೆವಾಣಿ ವಾರ್ತೆ
ಶಿವಮೊಗ್ಗ, ಏ. ೬; ಇಲ್ಲಿಗೆ ಸಮೀಪದ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜುಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.ಈತನನ್ನು ಶಿವಮೊಗ್ಗ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದ್ದು, ಇವನು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರತಿನಿತ್ಯ ಶಿವಮೊಗ್ಗ ದಿಂದ ಪಟ್ಟಣದ ಕಾಲೇಜಿ ವ್ಯಾಸಂಗಕ್ಕೆ ಬರುತ್ತಿದ್ದನು. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾನೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.