ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್, ದರ್ಶನ್ ಧ್ರುವ ನಾರಾಯಣ್ ಮತಯಾಚನೆ
ಸಂಜೆವಾಣಿ ವಾರ್ತೆ
ನಂಜನಗೂಡು: ಏ.06:- ಲೋಕಸಭಾ ಚುನಾವಣೆ ಹಿನ್ನೆಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡು ವಿಧಾನಸಭಾ ಕ್ಷೇತ್ರ ದೊಡ್ಡ ಕವಲಂದೆ ಮತ್ತು ಹುಲ್ಲಹಳ್ಳಿ ಹೋಬಳಿ ಕೇಂದ್ರದ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ಭಾಗವಹಿಸಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಮತ್ತು ಮಾಜಿ ಸಂಸದರಾದ ದಿ.ಆರ್. ಧ್ರುವನಾರಾಯಣ್ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಮಾತನಾಡಿ ಪೂಜ್ಯ ತಂದೆಯವಾರದ ಆರ್. ಧ್ರುವನಾರಾಯಣ್ ಅವರು ಸಂಸದರಾಗಿದ್ದ ಸಮಯದಲ್ಲಿ ಮೈಸೂರಿಂದ ಗುಂಡ್ಲುಪೇಟೆಗೆ ಹೋಗುವ ನಾಲ್ಕು ಪಥ ರಸ್ತೆ, ಚಾಮರಾಜನಗರದ ಕೇಂದ್ರೀಯ ವಿದ್ಯಾಲಯ, ಮೆಡಿಕಲ್ ಕಾಲೇಜು, ಕಾನೂನು ಕಾಲೇಜು, ಪಾಸ್ಪೋರ್ಟ್ ಕೇಂದ್ರ, ರೈತರಿಗೆ, ಕೂಲಿ ಕಾರ್ಮಿಕರಿಗೆ, ಹಿಂದುಳಿದವರಿಗೆ ಇಜ್ಜತ್ ಪಾಸ್, ಭವನಗಳು, ಸೇರಿದಂತೆ ಹತ್ತು ಹಲವಾರು ಕೆಲಸವನ್ನು ಅವರು ಸಂಸದರಾಗಿದ್ದಾಗ ಮಾಡಿದಂತವರು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಜೆಟ್ ನಲ್ಲಿ ನಂಜನಗೂಡು ತಾಲ್ಲೂಕಿನ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರದ ಅಭಿವೃದ್ಧಿಗೆ ಅನುದಾನ ನೀಡಿ, ದೇವನೂರು ಗ್ರಾಮ ಬಳಿ ನೀರಾವರಿ ಯೋಜನೆಯನ್ನು ನೀಡಿ ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದ್ರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ್ ಮನವಿ ಮಾಡಿ, ಮತಯಾಚನೆ ಮಾಡಿದರು.
ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ ಹಾಗೂ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಫಲಾನುಭವಿಗಳ ಮನೆ ಬಾಗಿಲಿಗೆ ಯೋಜನೆ ತಲುಪುತ್ತಿದೆ ಇನ್ನಷ್ಟು ಹೆಚ್ಚು ಹೆಚ್ಚು ಅಭಿವೃದ್ಧಿ ಆಗಬೇಕಾದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಬರಲು ಮತದಾರರು ಕಡ್ಡಾಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸಬೇಕು ನಿಮ್ಮ ಸೇವೆಗಾಗಿ ನಾವು ಸದಾ ಸಿದ್ದರಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಸಂದರ್ಭದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಸುನಿಲ್ ಬೋಸ್ ಚಾಮರಾಜನಗರ ಜಿಲ್ಲಾ ಅಧ್ಯಕ್ಷರು ಹಾಗೂ ಕಾಡಾ ಅಧ್ಯಕ್ಷರಾದ ಮರಿಸ್ವಾಮಿ ರವರು, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಕೆಪಿಸಿಸಿ ಉಸ್ತುವಾರಿ ರವಿ ಕುಮಾರ್ ರವರು, ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ರವರು, ಶ್ರೀಕಂಠ ನಾಯಕ ರವರು, ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ ರವರು, ಕೆ. ಮಾರುತಿ ರವರು, ನಾಗೇಶ್ ರಾಜ್ ರವರು, ಖಲೀಲ್ ಉರ್ ರಹ್ಮಾನ್ ಖಾನ್ ರವರು, ದೊರೆಸ್ವಾಮಿ ನಾಯಕ ರವರು, ಬುಲೆಟ್ ಮಹದೇವಪ್ಪ ರವರು, ಇಂಧನ್ ಬಾಬು ರವರು, ಶಿವಪ್ಪ ದೇವರು ರವರು, ಶ್ರೀನಿವಾಸ್ ಮೂರ್ತಿ ರವರು, ವಿಜಯ್ ಕುಮಾರ್ ರವರು, ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು