ಬಾಬು ಜಗಜೀವನ ರಾಮ್ ಕೊಡುಗೆ ಅನನ್ಯ
ಸಂಜೆವಾಣಿ ವಾರ್ತೆ
ಔರಾದ್ : ಏ.6:ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು ಮತ್ತವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳು ಅನನ್ಯ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಬಾಬು ಜಗಜೀವನ ರಾಮ್ ಜಯಂತಿ ಆಚರಣೆ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಬಾಬು ಜಗಜೀವನ ರಾಮ್ ಅವರ ಕೊಡುಗೆ ಸಮಾಜಕ್ಕೆ ಅಮೂಲ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಬಂಟಿ ದರ್ಬಾರೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲಕುಮಾರ ಮೆಲ್ದೊಡ್ಡಿ, ರವಿ ಬಂಬುಳಗೆ, ಅಮಿತ ಕುಲಕರ್ಣಿ ಸೇರಿದಂತೆ ಇನ್ನಿತರರಿದ್ದರು.