ಬಾಬು ಜಗಜೀವನರಾಂ ಹಸಿರು ಕ್ರಾಂತಿಯ ಹರಿಕಾರರು
ಭಾಲ್ಕಿ:ಏ.6: ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಡಾ.ಬಾಬು ಜಗಜೀವನರಾಂ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನನ್ಯವಾದುದು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದರು.
ಪಟ್ಟಣದ ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಅವರ 117ನೆಯ ಜಯಂತ್ಯುತ್ಸವ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಉಪ ಪ್ರಧಾನಿಯಾಗಿ ಮತ್ತು ವಿವಿಧ ಖಾತೆಗಳ ಸಚಿವರಾಗಿ ಬಾಬೂಜಿ ಕೈಗೊಂಡ ಕಾರ್ಯಗಳು ಸ್ಮರಣೀಯವಾಗಿವೆ. ರೈತ ಸಮುದಾಯದ ಏಳಿಗೆಗೆ ಅವರು ಕೈಗೊಂಡ ಯೋಜನೆಗಳು ದೇಶದ ಅಭಿವೃದ್ಧಿಗೆ ಪೂರಕವಾಗಿದ್ದವು. ಆವರು ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ಪುರಸಭೆ ಮಾಜಿ ಅಧ್ಯಕ್ಷರಾದ ಬಸವರಾಜ ವಂಕೆ, ವಿಶ್ವನಾಥ ಮೋರೆ, ಪ್ರಮುಖರಾದ ವಿಲಾಸ ಮೋರೆ, ಜೈಪಾಲ ಭೋರಾಳೆ, ವಿಶ್ವನಾಥ ಬಳಕಟ್ಟೆ ಸೇರಿದಂತೆ ಹಲವರು ಇದ್ದರು.