ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಬೇಕು:ಡಾ. ಜಾವಿದ ಜಮಾದಾರ
ವಿಜಯಪುರ,ಏ.5 :ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನ, ಕೌಶಲ್ಯ ತರಬೇತಿ, ಸ್ವಚ್ಚತೆ, ಸಮಯಪ್ರಜ್ಞೆ, ರಾಷ್ಟ್ರಾಭಿಮಾನ, ಪರಿಸರ ಸಂರಕ್ಷಣೆ, ಶ್ರಮದಾನ, ಸೇವಾ ಭಾವನೆ ಮೂಡಿಸುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಹಾಗೂ ರಾಜ್ಯ ಎನ್.ಎಸ್.ಎಸ್. ಸಲಹಾ ಸಮಿತಿ ಸದಸ್ಯ ಡಾ. ಜಾವಿದ ಜಮಾದಾರ ಹೇಳಿದರು.
ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದ ಜನರಿಗೆ ಪರೋಕ್ಷವಾಗಿ ಸೇವೆಯನ್ನು ಒದಗಿಸುವುದು ನಮ್ಮ ಉದ್ದೇಶವಾಗಿರಬೇಕು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಅರಿವು ಮೌಢ್ಯತೆ ಹೋಗಲಾಡಿಸುವುದು ಹೀಗೆ ಹಲವು ಮಾರ್ಗದಲ್ಲಿ ಯುವ ಜನತೆ ತಮ್ಮ ಸೇವೆಯ ಮೂಲಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಬೇಕಾಗಿದೆ ಎಂದರು.
ಮುದ್ದೇಬಿಹಾಳದ ಎಂ. ಜಿ. ವಿ. ಸಿ. ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಆರ್. ಜಿ. ಚಿಕ್ಕಮಠ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಶಿಕ್ಷಣ ಎಂಬ ಅಸ್ತ್ರದಿಂದ ಸಮಾಜದ ಅಭಿವೃದ್ಧಿ ಸಾಗುತ್ತದೆ, ನಿಸ್ವಾರ್ಥದಿಂದ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.
ವಿಜಯಪುರ ರಾಷ್ಟ್ರೀಯ ಸೇವಾ ಯೋಜನಾ ಕೋಶ ಜಿಲ್ಲಾ ಸಂಯೋಜನಾಧಿಕಾರಿ ಡಾ. ಪ್ರಕಾಶ ರಾಠೋಡ ಮಾತನಾಡಿ, ಯುವಕರು ಸಾಮಾಜಿಕ ಜಾಲತಾಣದಿಂದ ದೂರ ಉಳಿದು ತಮ್ಮನ್ನು ತಾವು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಹಿಟ್ಟಿನಹಳ್ಳಿ ವಿಪಿಕೆಪಿಎಸ್ ಅಧ್ಯಕ್ಷ ಶ್ರೀಕಾಂತ ಚೌಧÀರಿ ಅವರು ಮಾತನಾಡಿ, ಜೀವನದಲ್ಲಿ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹು ಮುಖ್ಯ ಎಂದು ಹೇಳಿದರು.
ವಿಜಯಪುರದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಅಧ್ಯಕ್ಷÀ ಡಾ. ಎಸ್.ಟಿ. ಬೋಳರೆಡ್ಡಿ ಅವರು, ಸೇವೆ ಎನ್ನುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿರುತ್ತದೆ ಎಂದು ನುಡಿದರು.
ಸಂಯೋಜಕÀ ಪಿ.ಆರ್. ಡೋಣೂರು ಸ್ವಾಗತಿಸಿದರು. ರಶ್ಮಿ ನಗಿನಾಳ ನಿರೂಪಿಸಿದರು. ಸುμÁ್ಮ ಬಿರಾದಾರ ವಂದಿಸಿದರು.