ವಿವಿಧೆಡೆಯಲ್ಲಿ ಡಾ|| ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ಸಂಜೆವಾಣಿ ವಾರ್ತೆ
ಬಳ್ಳಾರಿ, ಏ.05 ಹಸಿರು ಕ್ರಾಂತೀಯ ಹರಿಕಾರ, ಭಾರತ ಮಾಜಿ ಉಪ ಪ್ರಧಾನಮಂತ್ರಿಗಳೂ ಆಗಿದ್ದ ಡಾ|| ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಆಚರಿಸಲಾಯಿತು.
ಸರಳಾದೇವಿ ಕಾಲೇಜಿನಲ್ಲಿ:
ಬಾಬ ಜಗಜೀವನ್ ರಾಮ್ ಅವರ ಜಯಂತಿಯನ್ನು   ಸರಳಾದೇವಿ ಕಾಲೇಜಿನಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್ ಕೆ ಮಂಜುನಾಥ ರೆಡ್ಡಿ, ಪ್ರಾಧ್ಯಾಪಕರಾದ ಡಾ.ದಸ್ತಗೀರಸಾಬ್ ದಿನ್ನಿ , ಡಾ.ಶಶಿಕಾಂತ ಬಿಲ್ಲವ್,ಕೆ ಬಸಪ್ಪ ಇದ್ದರು