ಸಹಿ ಸಂಗ್ರಹ ಅಭಿಯಾನ
ಹುಬ್ಬಳ್ಳಿ,ಏ5 : ಇಂದು ತಾಲೂಕು ಆಡಳಿತಸೌಧದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಹಾಗೂ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ.ಸಂಗಮೇಶ ಬಂಗಾರಿಮಠ, ಚಂದ್ರಶೇಖರ ಕುರ್ತಕೋಟಿ, ಶಿವಾನಂದ ನಸಬಿ, ತಾಲೂಕು ಎಂ.ಆರ್.ಡಬ್ಲೂ ಮಹಾಂತೇಶ ಕುರ್ತಕೋಟಿ, ರಮೇಶ ಲಮಾಣಿ ಸೇರಿದಂತೆ ತಾಲೂಕು ಪಂಚಾಯತ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇತರರು ಭಾಗವಹಿಸಿದ್ದರು.