ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಧನಸಹಾಯ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ:ಏ.05: ತಾಲ್ಲೂಕಿನ ಕಸಬಾ ಹೋಬಳಿಯ ಚೌಡೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡದ ಅಭಿವೃದ್ಧಿಗೆ ಧನಸಹಾಯದ ಚೆಕ್ ವಿತರಣೆ ಮಾಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥಾಪಕರಾದ ಡಾ.ಡಿ.ವೀರೇಂದ್ರಹೆಗ್ಗಡೆಯವರು ಮಂಜೂರು ಮಾಡಿದ್ದ 02 ಲಕ್ಷ ರೂಪಾಯಿಗಳ ಡಿಡಿಯನ್ನು ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಸಂಘದ ಅಧ್ಯಕ್ಷರಾದ ರಾಧಾಚಂದ್ರೇಗೌಡ ಹಾಗು ಸಂಘದ ಪದಾಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಯೋಜನಾಧಿಕಾರಿ ಮಮತಾಶೆಟ್ಟಿ ನಮ್ಮ ಧರ್ಮಸ್ಥಳ ಸಂಸ್ಥೆಯಿಂದ ಖಾವಂದರು ಬಿಡುಗಡೆ ಮಾಡಿರುವ 02 ಲಕ್ಷ ರೂಪಾಯಿಗಳನ್ನು ಡೈರಿ ಕಟ್ಟಡದ ಅಭಿವೃದ್ಧಿಗೆ ನೀಡಲಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮೇಲ್ವಿಚಾರಕರಾದ ಮಮತಾ,ಕಾವ್ಯ ಸೇವಾಪ್ರತಿನಿಧಿ ಹರಿಣಿ, ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.